ಪುತ್ತೂರು: 2025-26 ನೇ ಸಾಲಿನ ದ.ಕ. ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತರಾದ ವೀರಮಂಗಲ ಪಿಎಂಶ್ರೀ ಶಾಲೆಯ ಮುಖ್ಯ ಶಿಕ್ಷಕ ತಾರಾನಾಥ ಸವಣೂರುರವರು ಸೆ.5 ರಂದು ಬೆಳ್ತಂಗಡಿಯ ಧರ್ಮಸ್ಥಳ ಮಂಜುನಾಥ ಸ್ವಾಮಿ ಕಲಾ ಭವನದಲ್ಲಿ ಜರಗಿದ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ ಸಮಾರಂಭದಲ್ಲಿ ಪ್ರಶಸ್ತಿ ಸ್ವೀಕರಿಸಿದರು.
ಸಮಾರಂಭದಲ್ಲಿ ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಸದಸ್ಯರುಗಳಾದ ಭೋಜೇ ಗೌಡ, ಪ್ರತಾಪ್ಸಿಂಹ ನಾಯಕ್. ಶಿಕ್ಷಣ ಇಲಾಖೆಯ ಅಧಿಕಾರಿಗಳಾದ ಡಿಡಿಪಿಐ ಶಶಿಧರ್ ಜಿ.ಎಸ್, ಡಯಟ್ ಪ್ರಾಂಶುಪಾಲ ಸದಾನಂದ ಪೂಂಜ ಸಹಿತ ಅನೇಕ ಮಂದಿ ಉಪಸ್ಥಿತರಿದ್ದರು.