ಪುತ್ತೂರು: ಬ್ಲಾಕ್ ಕಾಂಗ್ರೆಸ್ ಪುತ್ತೂರು ಇದರ ಮಾಸಿಕ ಸಭೆಯು ಸೆ.6ರಂದು ಒಳಮೊಗರು ಗ್ರಾಮೀಣ ಕಾಂಗ್ರೆಸ್‌ನ ಆತಿಥ್ಯದಲ್ಲಿ ಒಳಮೊಗರು ಗ್ರಾ.ಪಂ ಉಪಾಧ್ಯಕ್ಷ ಅಶ್ರಫ್ ಉಜಿರೋಡಿಯವರ ಮನೆಯಲ್ಲಿ ನಡೆಯಲಿದೆ.
ಶಾಸಕ ಅಶೋಕ್ ಕುಮಾರ್ ರೈಯವರ ಉಪಸ್ಥಿತಿಯಲ್ಲಿ ನಡೆಯುವ ಸಭೆಯಲ್ಲಿ ಜಿಲ್ಲಾ ಕಾಂಗ್ರೆಸ್ ಉಸ್ತುವಾರಿ ಚಿತ್ತರಂಜನ್ ಶೆಟ್ಟಿ ಬೊಂಡಾಲ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ.ಎಸ್ ಮಹಮ್ಮದ್, ಸಂಯೋಜಕ ಕಾವು ಹೇಮನಾಥ ಶೆಟ್ಟಿ, ಜಿಲ್ಲಾ ಕಾಂಗ್ರೆಸ್ ವಕ್ತಾರ ಮಹಮ್ಮದ್ ಬಡಗನ್ನೂರು, ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಎಂ.ಬಿ ವಿಶ್ವನಾಥ ರೈ, ಪ್ರಸಾದ್ ಕೌಶಲ್ ಶೆಟ್ಟಿ, ಸೇವಾ ದಳದ ಜಿಲ್ಲಾಧ್ಯಕ್ಷ ಜೋಕಿಂ ಡಿ ಸೋಜ ಸಹಿತ ಹಲವು ಪಕ್ಷದ ಮುಖಂಡರು ಭಾಗವಹಿಸಲಿದ್ದಾರೆ.
ಬ್ಲಾಕ್ ಕಾಂಗ್ರೆಸ್ ಪದಾಧಿಕಾರಿಗಳು, ವಲಯ ಅಧ್ಯಕ್ಷರು ಮತ್ತು ಪದಾಧಿಕಾರಿಗಳು, ಮುಂಚೂಣಿ ಘಟಕದ ಅಧ್ಯಕ್ಷರು ಮತ್ತು ಪದಾಧಿಕಾರಿಗಳು, ಬೂತ್ ಅಧ್ಯಕ್ಷರು ಮತ್ತು ಬೂತ್ ಲೆವೆಲ್ ಏಜೆಂಟ್‌ಗಳು ಸಭೆಯಲ್ಲಿ ಭಾಗವಹಿಸುವಂತೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣಪ್ರಸಾದ್ ಆಳ್ವ ತಿಳಿಸಿದ್ದಾರೆ.