ಪುತ್ತೂರು: ಪುತ್ತೂರಿನಲ್ಲಿ ಕಾಂಗ್ರೆಸ್ ಭವನಕ್ಕೆ ಜಾಗ ಮಂಜೂರು ಮಾಡಿದ ಶಾಸಕ ಅಶೋಕ್ ರೈ ಅವರನ್ನು ಬ್ಲಾಕ್ ಕಾಂಗ್ರೆಸ್ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣಪ್ರಸಾದ್ ಆಳ್ವ, ಪ್ರಧಾನ ಕಾರ್ಯದರ್ಶಿ ಪೂರ್ಣೇಶ್ ಭಂಡಾರಿ, ಎಸ್ಟಿ ಘಟಕದ ಅಧ್ಯಕ್ಷ ಮಹಾಲಿಂಗ ನಾಯ್ಕ, ಮಹಿಳಾ ಘಟಕದ ಕಾರ್ಯಾಧ್ಯಕ್ಷೆ ಚಂದ್ರಪ್ರಭಾ ಗೌಡ, ಪೂಡ ಸದಸ್ಯ ನಿಹಾಲ್ ಶೆಟ್ಟಿ, ಯಂಗ್ ಬ್ರಿಗೇಡ್ ಅಧ್ಯಕ್ಷ ರಂಜಿತ್ ಬಂಗೇರ, ಆರ್ಯಾಪು ವಲಯ ಕಾಂಗ್ರೆಸ್ ಅಧ್ಯಕ್ಷ ಗಿರೀಶ್ ರೈ, ಮುಂಡೂರು ಗ್ರಾ.ಪಂ ಸದಸ್ಯ ಕಮಲೇಶ್, ಕಾರ್ಪಾಡಿ ಸುಬ್ರಹ್ಮಣ್ಯ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಸದಸ್ಯ ಪ್ರಜ್ವಲ್ ರೈ ತೊಟ್ಲ, ಕೇಶವ ಸುವರ್ಣ, ಅಶೋಕ್ ಪಾಯಸ್, ಕೋಡಿಂಬಾಡಿ ಗ್ರಾ.ಪಂ ಉಪಾಧ್ಯಕ್ಷ ಜಯಪ್ರಕಾಶ್ ಬದಿನಾರು ಸಹಿತ ಹಲವು ಮಂದಿ ಉಪಸ್ಥಿತರಿದ್ದರು.