ನೆಲ್ಯಾಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ಕಡಬ ತಾಲೂಕು ನೆಲ್ಯಾಡಿ ವಲಯ ಮತ್ತು ಅಖಿಲ ಕರ್ನಾಟಕ ಜನ ಜಾಗೃತಿ ವೇದಿಕೆ ಕಡಬ ಇವುಗಳ ಆಶ್ರಯದಲ್ಲಿ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗಾಗಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ನೆಲ್ಯಾಡಿ ಸೂರ್ಯನಗರ ಶ್ರೀರಾಮ ವಿದ್ಯಾಲಯದಲ್ಲಿ ನಡೆಯಿತು.

ಅಧ್ಯಕ್ಷತೆ ವಹಿಸಿದ್ದ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ನೆಲ್ಯಾಡಿ ವಲಯಾಧ್ಯಕ್ಷ ಜಯಾನಂದ ಬಂಟ್ರಿಯಾಲ್‌ರವರು ಮಕ್ಕಳಿಗೆ ಮಾರ್ಗದರ್ಶನ ನೀಡಿದರು. ಶ್ರೀರಾಮ ವಿದ್ಯಾಲಯದ ಆಂಗ್ಲಮಾಧ್ಯಮ ವಿಭಾಗದ ಮುಖ್ಯಗುರು ಕಾವ್ಯ ಉದ್ಘಾಟಿಸಿದರು. ಅತಿಥಿಗಳಾಗಿದ್ದ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ನೆಲ್ಯಾಡಿ ವಲಯದ ಸದಸ್ಯ ತುಕರಾಮ ರೈ, ಶ್ರೀ ಕ್ಷೇತ್ರ ಧ.ಗ್ರಾ.ಯೋಜನೆ ಮಾದೇರಿ ಒಕ್ಕೂಟದ ಅಧ್ಯಕ್ಷ ಸೆಬಾಸ್ಟಿನ್, ನೆಲ್ಯಾಡಿ ಒಕ್ಕೂಟದ ಉಪಾಧ್ಯಕ್ಷೆ ಸುಮಿತ್ರಾ ಮಾತನಾಡಿದರು.

ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಶಿವಪ್ರಸಾದ್ ರೈ ಮೈಲೇರಿ ಅವರು ಮಾತನಾಡಿ, ದುಶ್ಚಟ ಮುಕ್ತ ಸಮಾಜ ನಿರ್ಮಿಸಲು ದುಶ್ಚಟದಿಂದ ದೂರವಿರಬೇಕು ಎಂದು ಹೇಳಿ ದುಶ್ಚಟದಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ಮಾಹಿತಿ ನೀಡಿದರು. ವಲಯ ಮೇಲ್ವಿಚಾರಕ ಆನಂದ್ ಡಿ.ಬಿ.ನಿರೂಪಿಸಿದರು. ಶ್ರೀರಾಮ ವಿದ್ಯಾಲಯದ ಶಿಕ್ಷಕಿ ಸುಜನಾ ಸ್ವಾಗತಿಸಿ, ಸಂಹಿತಾ ವಂದಿಸಿದರು.