ಬೆಥನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ

0

ಪುತ್ತೂರು: ದರ್ಬೆ ಪಾಂಗಳಾಯಿ ಬೆಥನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸೆ.೮ರಂದು ಶಿಕ್ಷಕರ ದಿನಾಚರಣೆ ಆಚರಿಸಿದರು.

ಡಾ. ಸರ್ವಪಳ್ಳಿ ರಾಧಾಕೃಷ್ಣನ್‌ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ರಕ್ಷಕ ಶಿಕ್ಷಕ ಸಂಘದ ಉಪಾಧ್ಯಕ್ಷ ರಘುನಾಥ್ ರೈ ಮಾತನಾಡಿ, ಶಿಕ್ಷಕರ ಸೇವೆಯನ್ನು ಕೊಂಡಾಡಿ ಅಭಿನಂದನಾ ಮಾತುಗಳನ್ನಾಡಿದರು.

ಮಕ್ಕಳ ಸುರಕ್ಷಾ ಸಮಿತಿಯ ಅಧ್ಯಕ್ಷ ಇಸ್ಮಾಯಿಲ್ ಶಾಫಿ ಅವರು ಅಭಿನಂದನಾ ಕಾರ್ಯಕ್ರಮವನ್ನು ನಡೆಸಿಕೊಟ್ಟರು. ಉಪಾಧ್ಯಕ್ಷೆ ತೆರೆಜಾ ಸಿಕ್ವೇರಾರವರು ಶುಭಹಾರೈಸಿದರು.

ಈ ಸಂದರ್ಭದಲ್ಲಿ ಬೆಥನಿ ಶಾಲಾ ವೆಬ್‌ಸೈಟ್ ಉದ್ಘಾಟನೆಗೊಂಡಿತು. ಶಾಲಾ ಸಂಚಾಲಕಿ ಭಗಿನಿ ಪ್ರಶಾಂತಿ ಬಿ.ಎಸ್. ಹಾಗೂ ಶಾಲಾ ಮುಖ್ಯೋಪಾಧ್ಯಾಯಿನಿ ಭಗಿನಿ ಅನಿತಾ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಶಿಕ್ಷಕರನ್ನು ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಂದ ನೃತ್ಯ, ಗೀತೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಪ್ರದರ್ಶನಗೊಂಡಿತು.

ಮಧ್ಯಾಹ್ನ ಶಾಲಾ ರಕ್ಷಕ ಶಿಕ್ಷಕ ಸಂಘದ ಕಾರ್ಯಕಾರಿ ಸಮಿತಿಯ ಸದಸ್ಯರಿಂದ ಶಿಕ್ಷಕರಿಗಾಗಿ ವಿಶೇಷ ಭೋಜನವನ್ನು ಏರ್ಪಡಿಸಲಾಗಿತ್ತು.

LEAVE A REPLY

Please enter your comment!
Please enter your name here