ಪುತ್ತೂರು: ದರ್ಬೆ ಪಾಂಗಳಾಯಿ ಬೆಥನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸುಸಜ್ಜಿತ ವಿಜ್ಞಾನ ಪ್ರಯೋಗಾಲಯವು ಸೆ.೨ರಂದು ಉದ್ಘಾಟನೆಗೊಂಡಿತು.
ಶಾಲಾ ರಕ್ಷಕ-ಶಿಕ್ಷಕ ಸಂಘದ ಉಪಾಧ್ಯಕ್ಷ ರಘುನಾಥ ರೈ, ಶಾಲಾ ಸಂಚಾಲಕಿ ಭಗಿನಿ ಪ್ರಶಾಂತಿ ಹಾಗೂ ಶಾಲಾ ಮುಖ್ಯೋಪಾಧ್ಯಾಯಿನಿ ಭಗಿನಿ ಅನಿತಾ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಮಕ್ಕಳ ಸುರಕ್ಷಾ ಸಮಿತಿಯ ಅಧ್ಯಕ್ಷ ಪ್ರೊ.ಇಸ್ಮಾಯಿಲ್ ಶಾಫಿಯವರು ರಸಾಯನಶಾಸ್ತ್ರದ ಪ್ರಯೋಗವೊಂದನ್ನು ನಡೆಸಿ ಪ್ರಯೋಗಾಲಯಕ್ಕೆ ಚಾಲನೆ ನೀಡಿದರು.
ಮಕ್ಕಳ ಸುರಕ್ಷಾ ಸಮಿತಿಯ ಉಪಾಧ್ಯಕ್ಷೆ ತೆರೆಜಾ ಸಿಕ್ವೇರಾ ಹಾಗೂ ರಕ್ಷಕ ಶಿಕ್ಷಕ ಸಂಘದ ಕಾರ್ಯಕಾರಿ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು. ವಿದ್ಯಾರ್ಥಿಗಳು ವೈವಿಧ್ಯಮಯ ವಿಜ್ಞಾನ ಪ್ರಯೋಗಗಳನ್ನು ನಡೆಸಿ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿದರು. ಶಿಕ್ಷಕರು, ಪೋಷಕರು ಹಾಗೂ ವಿದ್ಯಾರ್ಥಿಗಳು ಪ್ರಯೋಗಾಲಯಕ್ಕೆ ಭೇಟಿ ನೀಡಿ ವೀಕ್ಷಿಸಿದರು. ಸಹ ಶಿಕ್ಷಕಿಯರಾದ ಬೃಂದಾ ಮತ್ತು ಪವಿತ್ರಾ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು.