ನೆಲ್ಯಾಡಿ: ನೆಲ್ಯಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ, ಅಶ್ವಿನಿ ಆಸ್ಪತ್ರೆ ನೆಲ್ಯಾಡಿ ಮತ್ತು ಎ.ಜೆ.ವೈದ್ಯಕೀಯ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ ಮಂಗಳೂರು ಇವರ ಜಂಟಿ ಆಶ್ರಯದಲ್ಲಿ ಎ.ಜೆ.ವೈದ್ಯಕೀಯ ಆಸ್ಪತ್ರೆ ಮತ್ತು ಅಶ್ವಿನಿ ಆಸ್ಪತ್ರೆಯ ತಜ್ಞ ವೈದ್ಯರಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ ಸೆ.11ರಂದು ಬೆಳಿಗ್ಗೆ 9 ರಿಂದ 1.30ರ ತನಕ ನೆಲ್ಯಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಕಲ್ಪವೃಕ್ಷ ಸಹಕಾರಿ ಸೌಧದ ಕಾಮಧೇನು ಸಭಾಂಗಣದಲ್ಲಿ ನಡೆಯಲಿದ್ದು ಇದರ ಆಮಂತ್ರಣ ಪತ್ರಿಕೆ ಬಿಡುಗಡೆ ಇತ್ತೀಚೆಗೆ ಸಂಘದ ಕಚೇರಿಯಲ್ಲಿ ನಡೆಯಿತು.
ಸಂಘದ ಅಧ್ಯಕ್ಷ ಬಾಲಕೃಷ್ಣ ಬಾಣಜಾಲು, ಉಪಾಧ್ಯಕ್ಷ ರವಿಚಂದ್ರ ಹೊಸವಕ್ಲು, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಯಂ.ದಯಾಕರ ರೈ, ನಿರ್ದೇಶಕರಾದ ಸರ್ವೋತ್ತಮ ಗೌಡ, ಜಯಾನಂದ ಬಂಟ್ರಿಯಾಲ್, ಬಾಬು ನಾಯ್ಕ್ ಅಲಂಗಪೆ, ಭಾಸ್ಕರ ರೈ ತೋಟ, ಜಿನ್ನಪ್ಪ ಗೌಡ, ಸುಧಾಕರ ಬಾಗಿಲುಗದ್ದೆ, ಶೇಷಪ್ಪ ಪೈಸಾರಿ ಉಪಸ್ಥಿತರಿದ್ದರು.