ಪುತ್ತೂರು: ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಪುತ್ತೂರು, ಮೊರಾರ್ಜಿ ದೇಸಾಯಿ ವಸತಿ ಶಾಲೆ ಬಲ್ನಾಡು ಹಾಗೂ ಡಾ. ಬಿ. ಆರ್. ಅಂಬೇಡ್ಕರ್ ವಸತಿ ಶಾಲೆ ಉಪ್ಪಿನಂಗಡಿ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ವಲಯಮಟ್ಟದ 14 ವರ್ಷ ವಯೋಮಾನದ ಬಾಲಕಿಯರ ಕಬಡ್ಡಿ ಪಂದ್ಯಾಟದಲ್ಲಿ ದರ್ಬೆಯ ಬೆಥನಿ ಆಂಗ್ಲ ಮಾಧ್ಯಮ ಶಾಲೆಯ ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದೆ.
ಶಾಲಾ ಪ್ರಾಂಶುಪಾಲೆ ಭಗಿನಿ ಅನಿತಾ ರವರ ಮಾರ್ಗದರ್ಶನದಲ್ಲಿ ಶಿಕ್ಷಕರಾದ ಬಾಲಕೃಷ್ಣ ಪೊರ್ದಾಲ್ ರವರ ತರಬೇತಿ ನೀಡಿರುತ್ತಾರೆ.