ರಾಮಕುಂಜ: ಶ್ರೀ ರಾಮಕುಂಜೇಶ್ವರ ವಿದ್ಯಾಲಯದಲ್ಲಿ ಶಿಕ್ಷಕರ ದಿನಾಚರಣೆ ಮತ್ತು ಓಣಂ ಹಬ್ಬವನ್ನು ಸೆ.5ರಂದು ಆಚರಿಸಲಾಯಿತು.
ಶ್ರೀ ರಾಮಕುಂಜೇಶ್ವರ ವಿದ್ಯಾಲಯದ ಕಾರ್ಯದರ್ಶಿ ಕೆ.ಸೇಸಪ್ಪ ರೈ, ಪ್ರಾಂಶುಪಾಲ ಪ್ರವೀದ್ ಪಿ. ದೀಪ ಪ್ರಜ್ವಲಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ವಿದ್ಯಾರ್ಥಿಗಳ ನೇತೃತ್ವದಲ್ಲಿ ಶಿಕ್ಷಕರಿಗೆ ವಿವಿಧ ರೀತಿಯ ಸ್ಪರ್ಧೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಹಾಡು, ನೃತ್ಯಗಳ ಮೂಲಕ ಶಿಕ್ಷಕರಿಗೆ ಗೌರವ ಸೂಚಿಸಲಾಯಿತು.

ಅಧ್ಯಕ್ಷತೆ ವಹಿಸಿದ್ದ ಶಾಲೆಯ ಕಾರ್ಯದರ್ಶಿ ಕೆ. ಸೇಸಪ್ಪ ರೈ ಅವರು ಮಾತನಾಡಿ, ಶಿಕ್ಷಕರು ಸಮಾಜದ ದೀಪ ಸ್ತಂಭಗಳು. ಅವರ ತ್ಯಾಗ, ಶ್ರಮ ಹಾಗೂ ಮಾರ್ಗದರ್ಶನದಿಂದ ವಿದ್ಯಾರ್ಥಿಗಳ ಭವಿಷ್ಯ ರೂಪುಗೊಳ್ಳುತ್ತದೆ. ಆದ್ದರಿಂದ ಪ್ರತಿಯೊಬ್ಬ ವಿದ್ಯಾರ್ಥಿಯೂ ತಮ್ಮ ಶಿಕ್ಷಕರಿಗೆ ಸದಾ ಗೌರವ ತೋರಬೇಕು ಎಂದು ಹೇಳಿದರು. ಶಾಲೆಯ ಪ್ರಾಂಶುಪಾಲ ಪ್ರವೀದ್ ಪಿ. ಶುಭ ಹಾರೈಸಿದರು. ಕಾರ್ಯಕ್ರಮದ ಕೊನೆಯಲ್ಲಿ ವಿದ್ಯಾರ್ಥಿಗಳಿಗೆ ಸಿಹಿ ತಿಂಡಿ ವಿತರಣೆ ಮಾಡಲಾಯಿತು.