ಸೆ.7: ತೆಂಕಿಲ ಒಕ್ಕಲಿಗ ಗೌಡ ಸಮುದಾಯ ಭವನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ, ಶ್ರೀ ಗಣೇಶೋತ್ಸವ ವಿವಿಧ ಕಾರ್ಯಕ್ರಮ

0

ಪುತ್ತೂರು: ಒಕ್ಕಲಿಗ ಗೌಡ ಸೇವಾ ಸಂಘದ ಮಾರ್ಗದರ್ಶನದಲ್ಲಿ ಯುವ ಒಕ್ಕಲಿಗ ಗೌಡ ಸೇವಾ ಸಂಘದ ಆಶ್ರಯದಲ್ಲಿ ತೆಂಕಿಲ ಒಕ್ಕಲಿಗ ಗೌಡ ಸಮುದಾಯ ಭವನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಮತ್ತು ಶ್ರೀ ಗಣೇಶೋತ್ಸವದ ಅಂಗವಾಗಿ ಸೆ.7ರಂದು ವಿವಿಧ ಕಾರ್ಯಕ್ರಮಗಳು ನಡೆಯಲಿದೆ ಎಂದು ಯುವ ಒಕ್ಕಲಿಗ ಗೌಡ ಸೇವಾ ಸಂಘದ ಅಧ್ಯಕ್ಷ ಅಮರನಾಥ ಗೌಡ ಬಪ್ಪಳಿಗೆ ಅವರು ತಿಳಿಸಿದ್ದಾರೆ.


ಬೆಳಿಗ್ಗೆ ಬಲ್ನಾಡು ಶ್ರೀ ಉಳ್ಳಾಲ್ತಿ ದಂಡನಾಯಕ ಪರಿಚಾರಕ ಪರಮೇಶ್ವರ ಗೌಡ ಕಟ್ಟೆಮನೆ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಬಳಿಕ ಕಿರಿಯರಿಗೆ ಮತ್ತು ಹಿರಿಯರಿಗೆ ವಿವಿಧ ಆಟೋಟ ಸ್ಪರ್ಧೆ ನಡೆಯಲಿದೆ. ಮಧ್ಯಾಹ್ನ ನಡೆಯುವ ಸಭಾ ಕಾರ್ಯಕ್ರಮದಲ್ಲಿ ವಿಜೇತರಿಗೆ ಬಹುಮಾನ ವಿತರಣೆ ನಡೆಯಲಿದೆ.

LEAVE A REPLY

Please enter your comment!
Please enter your name here