ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ವಾಣಿಜ್ಯ ಸಂಘದ ವತಿಯಿಂದ ಫುಡ್ ಫೆಸ್ಟ್

0

ಆಹಾರೋದ್ಯಮದಲ್ಲಿ ವಿಪುಲವಾದ ಅವಕಾಶಗಳು: ಗಿರೀಶ್ ಎಂ

ಪುತ್ತೂರು: ವಿವೇಕಾನಂದ ಪದವಿಪೂರ್ವ ಕಾಲೇಜಿನ ವೈದೇಹಿ ಸಭಾಂಗಣದಲ್ಲಿ ವಾಣಿಜ್ಯ ಸಂಘದ ವತಿಯಿಂದ ಫುಡ್ ಫೆಸ್ಟ್ ಆಯೋಜಿಸಲಾಯಿತು.

ಪುತ್ತೂರು ದರ್ಬೆ ಸಂತೃಪ್ತಿ ಹೋಟೆಲ್ ಮಾಲೀಕ ಗಿರೀಶ್ ಎಂ ಕಾರ್ಯಕ್ರಮವನ್ನು ಉದ್ಘಾಟಿಸಿ,ಮಾತನಾಡಿ “ಕಲಿಕೆಯ ಜೊತೆಗೆ ಗಳಿಕೆ ಎಂಬ ಯೋಜನೆ ಇಂದಿನ ವಿದ್ಯಾರ್ಥಿಗಳಲ್ಲಿ ಬಂದರೆ ಅದಕ್ಕೆ ಪೂರಕವಾದ ಯೋಜನೆಗಳು ರೂಪುಗೊಳ್ಳುತ್ತವೆ. ಈ ರೀತಿ ಕಲಿಕೆ ಮತ್ತು ಗಳಿಕೆ ಜೊತೆಯಾಗಿ ಹೋದರೆ ದೇಶದ ಅಭಿವೃದ್ಧಿಯ ಕಡೆಗೆ ಒಂದು ಹೆಜ್ಜೆ ಇಟ್ಟಂತೆ. ವಿವಿಧ ರೀತಿಯ ಉದ್ಯಮ ಕ್ಷೇತ್ರಗಳಲ್ಲಿ ಆಹಾರೋದ್ಯಮಕ್ಕೆ ಎಂದಿಗೂ ಬೇಡಿಕೆ ಕಡಿಮೆಯಾಗುವುದಿಲ್ಲ. ಈ ಕ್ಷೇತ್ರದಲ್ಲಿಯೂ ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳುವ ಬಗೆಗೆ ಇಂದಿನ ಜನಾಂಗವು ಯೋಚಿಸಬೇಕಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ದೇವಿಚರಣ್ ರೈ ಎಂ ಉಪಸ್ಥಿತರಿದ್ದು, ಆಹಾರಮೇಳದಲ್ಲಿ ಪಾಲ್ಗೊಂಡ ವಿದ್ಯಾರ್ಥಿಗಳಿಗೆ ಹಾಗೂ ಕಾರ್ಯಕ್ರಮದ ಯಶಸ್ಸಿಗೆ ಶುಭ ಹಾರೈಸಿದರು. ದ್ವಿತೀಯ ವಾಣಿಜ್ಯ ವಿಭಾಗದ ಗೌರಿ ಸ್ವಾಗತಿಸಿ, ವೈಶಾಲಿ ವಂದಿಸಿದರು. ದೀಪಕ್ ಗುಜಾರ್ ಕಾರ್ಯಕ್ರಮವನ್ನು ನಿರೂಪಿಸಿದರು. ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯರು ಪ್ರಾರ್ಥಿಸಿದರು.

LEAVE A REPLY

Please enter your comment!
Please enter your name here