ಪುತ್ತೂರು: ಜಗದ್ಗುರು ಶ್ರೀಶಂಕರಾಚಾರ್ಯ ಸಂಸ್ಥಾನ ಎಡನೀರು ಮಠದಲ್ಲಿ ಶ್ರೀಸಚ್ಚಿದಾನಂದ ಭಾರತೀ ಸ್ವಾಮೀಜಿ ಅವರ ಪಂಚಮ ಚಾತುರ್ಮಾಸ್ಯ ಸಂದರ್ಭ ಪುತ್ತೂರಿನ ನೃತ್ಯೋಪಾಸನಾ ಕಲಾ ಅಕಾಡೆಮಿ ವತಿಯಿಂದ ‘ನೃತ್ಯೋಹಂ’ ನೃತ್ಯ ವೈವಿಧ್ಯ ಕಾರ್ಯಕ್ರಮ ನಡೆಯಿತು.

ನೃತ್ಯಗುರು ವಿದುಷಿ ಶಾಲಿನಿ ಆತ್ಮಭೂಷಣ್ ನಿರ್ದೇಶನದಲ್ಲಿ ಅಕಾಡೆಮಿಯ ವಿದ್ಯಾರ್ಥಿಗಳು ನೃತ್ಯ ಪ್ರದರ್ಶನ ನೀಡಿದರು. ಎಡನೀರು ಮಠಾಧೀಶ ಶ್ರೀಸಚ್ಚಿದಾನಂದ ಭಾರತೀ ಸ್ವಾಮೀಜಿ ಅವರು ಫಲಮಂತ್ರಾಕ್ಷತೆ ನೀಡಿ ಕಲಾವಿದರನ್ನು ಹರಸಿದರು.