ಟ್ರಾಫಿಕ್‍ ದಂಡದ ಮೊತ್ತದಲ್ಲಿ ಶೇ 50ರಷ್ಟು ರಿಯಾಯಿತಿ

0

ಪುತ್ತೂರು: ಕರ್ನಾಟಕ ರಾಜ್ಯಪಾಲರ ಆದೇಶದನ್ವಯ ಸಾರಿಗೆ ಇಲಾಖೆಯಿಂದ ಹೊರಡಿಸಿರುವ ಆದೇಶದಂತೆ ಪೋಲೀಸ್‍ ಇಲಾಖೆಯ ಸಂಚಾರಿ ಇ-ಚಲನ್‍ ನಲ್ಲಿ ದಾಖಲಾದ ಪ್ರಕರಣಗಳ ದಂಡದ ಮೊತ್ತದಲ್ಲಿ ಶೇ.50ರಷ್ಟು ರಿಯಾ‍ಯಿತಿ ನೀಡಲಾಗಿದೆ. ಈ ರಿಯಾಯಿತಿಯು ಮುಂಬರುವ ರಾಷ್ಟ್ರೀಯ ಲೋಕ ಅದಾಲತ್‍ ಸೆ.13ರ ಸಂಬಂಧ ಆದೇಶಿಸಲಾಗಿದ್ದು, ಆ.23ರಿಂದ ಸೆ.12ರ ವರೆಗೆ ಇತ್ಯರ್ಥಗೊಳ್ಳುವ ಪ್ರಕರಣಗಳಿಗೆ ಮಾತ್ರ ಅನ್ವಯವಾಗುತ್ತದೆ. ಆದ್ದರಿಂದ ಸಾರ್ವಜನಿಕರು ಇದರ ಸದುಪ‍ಯೋಗ ಪಡೆದುಕೊಂಡು ಶೇ.50ರಷ್ಟು ರಿಯಾಯಿತಿಯಲ್ಲಿ ದಂಡ ಪಾವತಿಸುವ ಮೂಲಕ ತಮ್ಮ ಪ್ರಕರಣಗಳನ್ನು ಇತ್ಯರ್ಥ ಪಡಿಸಿಕೊಳ್ಳಬಹುದು ಎಂದು ತಾಲೂಕು ಕಾನೂನು ಸೇವೆಗಳ ಪ್ರಾಧಿಕಾರದ ಪ್ರಕಟಣೆ ತಿಳಿಸಿದೆ.

ಸಾಂದ

LEAVE A REPLY

Please enter your comment!
Please enter your name here