ಪುತ್ತೂರು: ಸೌತ್ ಕೆನರಾ ಫೋಟೋಗ್ರಾಫರ್ಸ್ ಎಸೋಸಿಯೇಷನ್ನ ಪುತ್ತೂರು ವಲಯದಿಂದ ಶಿಕ್ಷಕರ ದಿನಾಚರಣೆಯ ಅಂಗವಾಗಿ ಸೆ.5ರಂದು ದರ್ಬೆ ಲಿಟ್ಲ್ ಫ್ಲವರ್ ಹಿ.ಪ್ರಾ ಶಾಲೆಯ ನಿವೃತ್ತ ಶಿಕ್ಷಕಿ ಮೇರಿ ಡಿಸಿಲ್ವಾ ಅವರನ್ನು ಸನ್ಮಾನಿಸಿ, ಗೌರವಿಸಿದರು.
ಎಸೋಸಿಯೇಷನ್ನ ಪುತ್ತೂರು ವಲಯದ ಅಧ್ಯಕ್ಷ ರಘು ಶೆಟ್ಟಿ, ಕಾರ್ಯದರ್ಶಿ ಚಂದ್ರಶೇಖರ ಶೆಟ್ಟಿ, ಜಿಲ್ಲಾ ಕೋಶಾಧಿಕಾರಿ ನವೀನ್ ರೈ ಪಂಜಳ, ನಿಯೋಜಿತ ಅಧ್ಯಕ್ಷ ಜಯಂತ ಗೌಡ, ನಿಯೋಜಿತ ಕಾರ್ಯದರ್ಶಿ ಗಣೇಶ್ ಕಟ್ಟಪುಣಿ ಹಾಗೂ ವಲಯದ ಸದಸ್ಯರು ಉಪಸ್ಥಿತರಿದ್ದರು.