‘ಜಗತ್ತನ್ನು ಪರಿವರ್ತನೆ ಮಾಡುವ ಸಾಧನೆ ನಮ್ಮಲ್ಲಿದೆ ಎಂಬುದಕ್ಕೆ ಸೇರಿದ ಜನಸ್ತೋಮವೇ ಸಾಕ್ಷಿ’ – ಶ್ರೀ ಸಾದ್ವಿ ಮಾತಾನಂದಮಯಿ
ಪುತ್ತೂರು: ಸಾಧನೆ ಮಾಡಿದರೆ ಏನು ಬೇಕಾದರೂ ಸಾಧಿಸಬಲ್ಲವೆಂಬುದಕ್ಕೆ ಕಳೆದ ಎರಡು ವರ್ಷದ ಶ್ರೀನಿವಾಸ ಕಲ್ಯಾಣೋತ್ಸವದಲ್ಲಿ ಕಂಡಿದ್ದೇವೆ. ಜಗತ್ತನ್ನು ಪರಿವರ್ತನೆ ಮಾಡುವ ಸಾಧನೆ ನಮ್ಮಲ್ಲಿ ಇದೆ ಎಂಬುದಕ್ಕೆ 3ನೇ ವರ್ಷದ ಶ್ರೀನಿವಾಸ ಕಲ್ಯಾಣೋತ್ಸವ ಆಮಂತ್ರಣ ಪತ್ರ ಬಿಡುಗಡೆಗೆ ಸೇರಿದ ಜನಸ್ತೋಮವೇ ಸಾಕ್ಷಿಯಾಗಿದೆ ಎಂದು ಒಡಿಯೂರು ಶ್ರೀ ಸಾಧ್ವಿ ಮಾತಾನಂದಮಯಿ ಹೇಳಿದರು.

ಪುತ್ತಿಲ ಪರಿವಾರ ಸೇವಾ ಟ್ರಸ್ಟ್, ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿಯಿಂದ ನ.29 ಮತ್ತು 30ರಂದು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ನಡೆಯುವ 3ನೇ ವರ್ಷದ ಶ್ರೀನಿವಾಸ ಕಲ್ಯಾಣೋತ್ಸವ ಮತ್ತು ಸಾಮೂಹಿಕ ವಿವಾಹ ಮತ್ತು ಹಿಂದವಿ ಸಾಮ್ರಾಜ್ಯೋತ್ಸವ ಕಾರ್ಯಕ್ರಮದ ಆಮಂತ್ರಣ ಪತ್ರವನ್ನು ಬಿಡುಗಡೆ ಮಾಡಿ ಆಶೀರ್ವದಿಸಿದರು.
ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿ ಅಧ್ಯಕ್ಷ ನರಸಿಂಹ ಪ್ರಸಾದ್ ಅಧ್ಯಕ್ಷತೆ ವಹಿಸಿದರು. ಸಂಚಾಲಕ ಅರುಣ್ ಕುಮಾರ್ ಪುತ್ತಿಲ, ಗೌರವಾಧ್ಗ್ಯಕ್ಷರಾದ ಸಿದ್ದನಾಥ್ ಕಂದಾರೆ, ಕಾರ್ಯಾಧ್ಯಕ್ಷ ಪ್ರಾಣೇಶ್, ಕೋಶಾಧಿಕಾರಿ ಉದಯ ಕುಮಾರ್, ಪ್ರಧಾನ ಕಾರ್ಯದರ್ಶಿ ಪ್ರವೀಣ್ ರೈ ತಿಂಗಳಾಡಿ, ಉಮೇಶ್ ಕೋಡಿಬೈಲು, ವೆಂಕಟ್ರಮಣ ಕಡಬ, ಭೀಮ ಭಟ್, ಅನಿಲ್ ತೆಂಕಿಲ, ಟ್ರಸ್ಟ್ ನ ಪ್ರಧಾನ ಕಾರ್ಯದರ್ಶಿ ಪ್ರೇಮರಾಜ್, ಕೋಶಾಧಿಕಾರಿ ರೂಪೇಶ್ ನಾಕ್ ಮಹಿಳಾ ಘಟಕದ ಅಧ್ಯಕ್ಷೆ ಪ್ರೇಮಾ ಮತ್ತಿತರರು ಉಪಸ್ಥಿತರಿದ್ದರು.