ಕಾಣಿಯೂರು: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ ದ.ಕ ಜಿಲ್ಲೆ ಮಂಗಳೂರು ವತಿಯಿಂದ ವಾಣಿ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯಲ್ಲಿ ನಡೆದ ಪ್ರೌಢಶಾಲಾ ವಿಭಾಗದ ಬಾಲಕಿಯರ ಚದುರಂಗ ಪಂದ್ಯಾಟದಲ್ಲಿ ಕಾಣಿಯೂರು ಪ್ರಗತಿ ವಿದ್ಯಾಸಂಸ್ಥೆಯ ವಿದ್ಯಾರ್ಥಿನಿ ಸಾನ್ವಿಕ ಎಚ್ (9ನೇ ಆ.ಮಾ) ಚತುರ್ಥ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಇವರು ಸುಳ್ಯ ತಾಲೂಕಿನ ಮುರುಳ್ಯ ಗ್ರಾಮದ ಶೇರ ಯಾದವ ಎಚ್ ಮತ್ತು ವೀಣಲತಾ ದಂಪತಿಗಳ ಸುಪುತ್ರಿ. ಇವರಿಗೆ ಸಂಸ್ಥೆಯ ಟ್ರಸ್ಟಿ ಹರಿಚರಣ್ ರೈ ಮಾದೋಡಿ ಮಾರ್ಗದರ್ಶನ ನೀಡಿರುತ್ತಾರೆ. ಸಂಸ್ಥೆಯ ದೈಹಿಕ ಶಿಕ್ಷಣ ಶಿಕ್ಷಕ ಸಂತೋಷ್ ಕುಮಾರ್, ಶಿಕ್ಷಕ ಅಶೋಕ್ ಕುಮಾರ್ ಪಿ ಸಹಕರಿಸಿದರು. ವಿಜೇತರನ್ನು ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷ ಜಗನ್ನಾಥ ರೈ ನುಳಿಯಾಲು, ಸಂಚಾಲಕ ಜಯಸೂರ್ಯ ರೈ ಮಾದೋಡಿ, ಶಾಲಾ ಆಡಳಿತ ಅಧಿಕಾರಿ ವಸಂತ ರೈ ಕಾರ್ಕಳ, ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ದಿವೀಶ್ ಮುರುಳ್ಯ, ಮುಖ್ಯಗುರುಗಳು , ಶಿಕ್ಷಕ-ಶಿಕ್ಷಕೇತರ ವೃಂದದವರು ಅಭಿನಂದಿಸಿದರು.
