ಕಾಣಿಯೂರು ಶಾಲೆಯಲ್ಲಿ ವಲಯ ಮಟ್ಟದ ಬಾಲಕ, ಬಾಲಕಿಯರ ಕಬಡ್ಡಿ ಪಂದ್ಯಾಟ

0

ಬಾಲಕಿಯರ ವಿಭಾಗದಲ್ಲಿ ಕಾಣಿಯೂರು ಸ.ಹಿ.ಪ್ರಾ.ಶಾಲೆ, ಬಾಲಕರ ವಿಭಾಗದಲ್ಲಿ ಕಾಣಿಯೂರು ಪ್ರಗತಿ ಪ್ರಥಮ

ಕಾಣಿಯೂರು: ಗ್ರಾಮೀಣ ಪ್ರದೇಶದಲ್ಲಿರುವ ಕ್ರೀಡಾ ಪ್ರತಿಭೆಗಳನ್ನು ಗುರುತಿಸಲು ಇಂತಹ ಕ್ರೀಡಾಕೂಟ ಸಹಕಾರಿಯಾಗಿದ್ದು, ಇದರ ಸದುಪಯೋಗವನ್ನು ವಿದ್ಯಾರ್ಥಿಗಳು ಪಡೆದುಕೊಂಡು ರಾಜ್ಯ, ರಾಷ್ಟ್ರ ಮಟ್ಟದಲ್ಲಿಯೂ ಗುರುತಿಸಿಕೊಳ್ಳಬೇಕು ಎಂದು ಕಾಣಿಯೂರು ಗ್ರಾಮ ಪಂಚಾಯತ್ ಅಧ್ಯಕ್ಷ ವಿಶ್ವನಾಥ ಕೊಪ್ಪ ಹೇಳಿದರು.

ಅವರು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಪುತ್ತೂರು, ಕಾಣಿಯೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಇದರ ಆಶ್ರಯದಲ್ಲಿ ಸೆ 6ರಂದು ಕಾಣಿಯೂರು ಸ. ಹಿ. ಪ್ರಾ. ಶಾಲೆಯಲ್ಲಿ ನಡೆದ ಸವಣೂರು ವಲಯ ಮಟ್ಟದ 14ರ ವಯೋಮಾನದ ಶಾಲಾ ಬಾಲಕ-ಬಾಲಕಿಯರ ಕಬಡ್ಡಿ ಪಂದ್ಯಾಟವನ್ನು ಉದ್ಘಾಟಿಸಿ ಮಾತನಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಣಿಯೂರು ಸ. ಹಿ. ಪ್ರಾ. ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷ ಪರಮೇಶ್ವರ ಅನಿಲ ವಹಿಸಿದ್ದರು. ಪುತ್ತೂರು ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಚಕ್ರಪಾಣಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾಣಿಯೂರು ಶಾಲೆಯ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಪದ್ಮಯ್ಯ ಗೌಡ ಅನಿಲ ಶುಭಹಾರೈಸಿದರು. ಕಾಣಿಯೂರು ಶ್ರೀ ಮಠದ ಮೆನೇಜರ್ ಶ್ರೀನಿಧಿ ಆಚಾರ್, ಕಾಣಿಯೂರು ಗ್ರಾಮ ಪಂಚಾಯತ್ ಸದಸ್ಯ ರಾಮಣ್ಣ ಗೌಡ ಮುಗರಂಜ, ಚಾರ್ವಾಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಗಣೇಶ್ ಉದನಡ್ಕ, ಬೆಳಂದೂರು ಗ್ರಾಮ ಪಂಚಾಯತ್ ಉಪಾಧ್ಯಕ್ಷ ಜಯಂತ ಅಬೀರ, ದ.ಕ ಜಿಲ್ಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಕಾರ್ಯಾಧ್ಯಕ್ಷ ಮಾಮಚ್ಚನ್, ದ.ಕ ಜಿಲ್ಲೆಯ ಮುಖ್ಯಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ನಿಂಗರಾಜು, ಸವಣೂರು ವಲಯದ ನೋಡೆಲ್ ಅಧಿಕಾರಿ ಕೃಷ್ಣಪ್ರಸಾದ್, ಕಡಬ ತಾಲೂಕು ಪ್ರೌಢ ಶಾಲಾ ಶಿಕ್ಷಕರ ಸಂಘದ ಕಾರ್ಯದರ್ಶಿ ಶ್ರೀಲತಾ, ಸಿ.ಆರ್.ಪಿ ಯಶೋದ, ಎಸ್ ಡಿ ಎಂ ಸಿ ಉಪಾಧ್ಯಕ್ಷೆ ಯಶೋದ ನೇರೋಳ್ತಡ್ಕ ಉಪಸ್ಥಿತರಿದ್ದರು. ಮುಖ್ಯಗುರು ಬಾಲಕೃಷ್ಣ ಕೆ ಸ್ವಾಗತಿಸಿ, ಶಿಕ್ಷಕಿ ವೀಕ್ಷಿತಾ ವಂದಿಸಿದರು. ಶಿಕ್ಷಕಿ ಸುಜಯ ಕಾರ್ಯಕ್ರಮ ನಿರೂಪಿಸಿದರು.

ಸನ್ಮಾನ:
ಈ ಸಂದರ್ಭದಲ್ಲಿ ರಾಷ್ಟ್ರ ಮಟ್ಟದ ಕಬ್ಬಡಿ ಆಟಗಾರರಾದ ಸೌಮ್ಯ ಅಬೀರ ಅವರನ್ನು ಸನ್ಮಾನಿಸಲಾಯಿತು.

ಫಲಕ ಅನಾವರಣ
ಪ್ರಥಮ ಮತ್ತು ದ್ವಿತೀಯ ಹಾಗೂ ವೈಯುಕ್ತಿಕ ಫಲಕಗಳನ್ನು ಕಲ್ಪಡ ಕೊಡಿಯಾಲ ನಮ್ಮೂರ ನಮ್ಮ ಕನಸು ಜನಸೇವಾ ಟ್ರಸ್ಟ್ ಇದರ ಅಧ್ಯಕ್ಷರಾದ ಸುಬ್ರಹ್ಮಣ್ಯ ಕೆ. ಎಂ ಕಲ್ಪಡ ಹಾಗೂ ಕೂಡುರಸ್ತೆ ಫ್ರೆಂಡ್ಸ್ ಸ್ಪೋರ್ಟ್ಸ್ ಕ್ಲಬ್ ನ ಕಾರ್ಯದರ್ಶಿ ರಕ್ಷಿತ್ ಮುಗರಂಜ ಅವರು ಅನಾವರಣಗೊಳಿಸಿದರು.

ಸಮಾರೋಪ ಸಮಾರಂಭ:
ಸಂಜೆ ನಡೆದ ಸಮಾರೋಪ ಸಮಾರಂಭದಲ್ಲಿ ವಿಜೇತ ತಂಡಗಳಿಗೆ ಟ್ರೋಫಿ ವಿತರಿಸಲಾಯಿತು. ಈ ಸಂದರ್ಭದಲ್ಲಿ ಕಾಣಿಯೂರು ಗ್ರಾ.ಪಂ. ಸದಸ್ಯ ವಸಂತ ಪೆರ್ಲೋಡಿ, ಕಾಣಿಯೂರು ಶ್ರೀ ಲಕ್ಷ್ಮೀನರಸಿಂಹ ಭಜನಾ ಮಂಡಳಿ ಅಧ್ಯಕ್ಷ ಪುಟ್ಟಣ್ಣ ಗೌಡ ಮುಗರಂಜ, ಎಸ್ ಡಿ ಎಂ ಸಿ ಅಧ್ಯಕ್ಷ ಪರಮೇಶ್ವರ ಅನಿಲ, ಉಪಾಧ್ಯಕ್ಷೆ ಯಶೋದ, ಸಿ ಆರ್ ಪಿ ಯಶೋದ, ಶಾಲಾ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಪದ್ಮಯ್ಯ ಗೌಡ ಅನಿಲ, ಕಾರ್ಯದರ್ಶಿ ರವೀಂದ್ರ ಅನಿಲ, ಕಾಣಿಯೂರು ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಸುರೇಶ್ ಓಡಬಾಯಿ, ಕಾಣಿಯೂರು ಶ್ರೀ ಲಕ್ಷ್ಮೀನರಸಿಂಹ ಯುವಕ ಮಂಡಲದ ಅಧ್ಯಕ್ಷ ರಾಜೇಶ್ ಮೀಜೆ, ಕಾಣಿಯೂರು ಜಾತ್ರೋತ್ಸವ ಸೇವಾ ಸಮಿತಿಯ ಅಧ್ಯಕ್ಷ ರಮೇಶ್ ಮಾದೋಡಿ, ಕೂಡುರಸ್ತೆ ಫ್ರೆಂಡ್ಸ್ ಸ್ಪೋರ್ಟ್ಸ್ ಕ್ಲಬ್ ನ ಕಾರ್ಯದರ್ಶಿ ರಕ್ಷಿತ್ ಮುಗರಂಜ ಮತ್ತಿತರರು ಉಪಸ್ಥಿತರಿದ್ದರು. ಶಾಲಾ ಮುಖ್ಯಗುರು ಬಾಲಕೃಷ್ಣ ಕೆ ಸ್ವಾಗತಿಸಿ, ವಂದಿಸಿದರು.

ವಿಜೇತರ ವಿವರ
ಬಾಲಕಿಯರ ವಿಭಾಗದಲ್ಲಿ ಕಾಣಿಯೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಪ್ರಥಮ ಸ್ಥಾನ ಪಡೆದುಕೊಂಡು, ಕಾಣಿಯೂರು ಪ್ರಗತಿ ವಿದ್ಯಾಸಂಸ್ಥೆ ದ್ವಿತೀಯ ಸ್ಥಾನ ಪಡೆದುಕೊಂಡವು. ಬಾಲಕರ ವಿಭಾಗದಲ್ಲಿ ಕಾಣಿಯೂರು ಪ್ರಗತಿ ವಿದ್ಯಾಸಂಸ್ಥೆ ಪ್ರಥಮ ಸ್ಥಾನ ಪಡೆದುಕೊಂಡು, ಸವಣೂರು ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢ ಶಾಲೆ ದ್ವಿತೀಯ ಸ್ಥಾನ ಪಡೆದುಕೊಂಡಿತು.

LEAVE A REPLY

Please enter your comment!
Please enter your name here