ಪುತ್ತೂರು: ವಿವೇಕಾನಂದ ಸೆಂಟ್ರಲ್ ಸ್ಕೂಲ್ ನಲ್ಲಿ ಸೆಪ್ಟೆಂಬರ್ 6ರಂದು “ವಾಣಿಜ್ಯದಲ್ಲಿ ವೃತ್ತಿ ಮಾರ್ಗಗಳು” ಎಂಬ ವಿಷಯದ ಕುರಿತು, ‘ಚೇತನ’ ತಜ್ಞರೊಂದಿಗಿನ ಸಂವಾದ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಗಳಾದ ವೃತ್ತಿಪರ ಕೋರ್ಸ್‌ಗಳ ಪ್ರಾಧ್ಯಾಪಕ ರಾಜಗಣೇಶ್ ಕಾಮತ್ , ತಮ್ಮ ಅನುಭವಗಳನ್ನು ಹಂಚಿಕೊಂಡರು ಮತ್ತು ವಾಣಿಜ್ಯ ಕ್ಷೇತ್ರದಲ್ಲಿ ಲಭ್ಯವಿರುವ ವ್ಯಾಪಕ ಅವಕಾಶಗಳ ಕುರಿತು ವಿದ್ಯಾರ್ಥಿಗಳಿಗೆ ಉಪಯುಕ್ತ ಮಾರ್ಗದರ್ಶನ ನೀಡಿದರು. ಮಾತ್ರವಲ್ಲದೆ, CA, CS, CMAಗಳಂತಹ ನವೀನ ವೃತ್ತಿಪರ ಕೋರ್ಸ್‌ಗಳ ವ್ಯಾಪ್ತಿಯ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿವಳಿಕೆ ನೀಡಿದರು. ನೆರದ ವಿದ್ಯಾರ್ಥಿಗಳೆಲ್ಲರು ಸಂವಾದದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ತಮ್ಮ ಸಂಶಯಗಳನ್ನು ಪರಿಹರಿಸಿಕೊಂಡರು.
ಕಾರ್ಯಕ್ರಮದಲ್ಲಿ ಶಾಲಾ ಪ್ರಾಂಶುಪಾಲರಾದ ಸಿಂಧು ವಿ. ಜಿ. ಹಾಗೂ ಶಿಕ್ಷಕರು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು 9ನೇ ತರಗತಿಯ ವಿದ್ಯಾರ್ಥಿಗಳಾದ ಶ್ರಾವಣಿ ನಿರೂಪಿಸಿ, ಶ್ರಾವ್ಯ ಸ್ವಾಗತಿಸಿ, ಹರ್ಷವರ್ಧನ ವಂದಿಸಿದರು. ಶಾಲಾ ಶಿಕ್ಷಕಿ ಅಕ್ಷತಾ ಕಾರ್ಯಕ್ರಮವನ್ನು ಪ್ರಾಯೋಜಿಸಿದರು.