ಪುತ್ತೂರು: ಪುತ್ತೂರು ಸೈಂಟ್ ವಿಕ್ಟರ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ಮಂತ್ರಿ ಮಂಡಲದ ಸದಸ್ಯ ವಿದ್ಯಾರ್ಥಿಗಳು ಹಾಗೂ ರಕ್ಷಕ ಶಿಕ್ಷಕ ಸಂಘದ ಸದಸ್ಯರು ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ನೆರವೇರಿಸಿದರು.
ಅಧ್ಯಕ್ಷ ಸ್ಥಾನ ವಹಿಸಿದ್ದ ಶಾಲಾ ಸಂಚಾಲಕ ವಂದನೀಯ ಫಾದರ್ ಲಾರೆನ್ಸ್ ಮಸ್ಕರೇನ್ಹಸ್ ಹಾಗೂ ಶಿಕ್ಷಕ ರಕ್ಷಕ ಸಂಘದ ಉಪಾಧ್ಯಕ್ಷ ಸದಾಶಿವ ಶೆಟ್ಟಿ,ಕಾರ್ಯದರ್ಶಿ ರಶ್ಮಿ ರಾಜೇಶ್ ಹಾಗೂ ಸಮಿತಿಯ ಸದಸ್ಯರು ಶಾಲಾ ವಿದ್ಯಾರ್ಥಿಗಳು ಅಲ್ಲಿನ ಕಾರ್ಯಕ್ರಮದ ಕೇಂದ್ರ ಬಿಂದುಗಳಾದ ಶಿಕ್ಷಕರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
2025-26 ನೇ ಸಾಲಿನ ರಕ್ಷಕ ಶಿಕ್ಷಕ ಸಂಘದ ವತಿಯಿಂದ ಶಾಲ ಶಿಕ್ಷಕರಿಗೆ ಗೌರವಿಸಲಾಯಿತು. ವಿವಿಧ ಸ್ಫರ್ಧೆ ಶಿಕ್ಷಕರಿಗಾಗಿ ನಡೆಯಿತು. ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಶಿಕ್ಷಕರು ಭಾಗವಹಿಸಿದರು.ಶಾಲಾ ವಿದ್ಯಾರ್ಥಿಗಳಿಂದ ಕಾರ್ಯಕ್ರಮ ನಿರೂಪಿಸಿದರು. ಮುಖ್ಯ ಶಿಕ್ಷಕರು ವಂದಿಸಿದರು.