ರಾಮಕುಂಜ: ಶ್ರೀ ರಾಮಕುಂಜೇಶ್ವರ ಪ.ಪೂ.ಕಾಲೇಜಿನಲ್ಲಿ ಕಡಬ ತಾಲೂಕು ಮಟ್ಟದ ಪ.ಪೂ.ಕಾಲೇಜು ಬಾಲಕ-ಬಾಲಕಿಯರ ವಾಲಿಬಾಲ್ ಪಂದ್ಯಾಟ ನಡೆಯಿತು.
ಸಂಸ್ಥೆಯ ಹಿರಿಯ ವಿದ್ಯಾರ್ಥಿ ಮತ್ತು ಕಡಬ ತಾಲೂಕು ವಾಲಿಬಾಲ್ ಅಸೋಸಿಯೇಷನ್‌ನ ಉಪಾಧ್ಯಕ್ಷ ದೇವಿಪ್ರಸಾದ್ ನೀರಾಜೆ ಉದ್ಘಾಟಿಸಿ ಮಾತನಾಡಿ, ಯುವ ಜನರಿಗಾಗಿ ನಡೆಯುತ್ತಿರುವ ಈ ಪಂದ್ಯಾಟವು ಉತ್ತಮ ರೀತಿಯಲ್ಲಿ ನಡೆಯುವಂತಾಗಲಿ. ಆ ಮೂಲಕ ಉತ್ತಮ ಕ್ರೀಡಾಪಟುಗಳು ಸಮಾಜದಲ್ಲಿ ಮೂಡಿಬರುವಂತಾಗಲಿ ಎಂದು ಹೇಳಿ ಶುಭ ಹಾರೈಸಿದರು.

ಮುಖ್ಯ ಅತಿಥಿಯಾಗಿದ್ದ ಸಂಸ್ಥೆಯ ಹಿರಿಯ ವಿದ್ಯಾರ್ಥಿ, ಮಂಗಳೂರು ವಿಶ್ವವಿದ್ಯಾನಿಲಯ ವಾಲಿಬಾಲ್ ತಂಡದ ಮಾಜಿ ನಾಯಕ ಫಲೂಲುದ್ಧೀನ್ ಹೇಂತಾರ್ ಮಾತನಾಡಿ, ಸೋತಾಗ ಕುಗ್ಗದೆ, ಗೆದ್ದಾಗ ಹಿಗ್ಗದೆ ಮುನ್ನಡೆಯುವುದು ನಾವೆಲ್ಲರೂ ಮಾಡಬೇಕಾದ ಅಗತ್ಯ ಕಾರ್ಯ. ಎಲ್ಲಾ ಆಟಗಾರರು ಈ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಿ ಯಶಸ್ಸನ್ನು ಕಾಣುವಂತಾಗಲಿ ಎಂದು ಹೇಳಿದರು. ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಅಶೋಕ್ ಕೊಯಿಲ, ಕಡಬ ತಾಲೂಕಿನ ಕ್ರೀಡಾ ಸಂಯೋಜಕ ಮಹಮ್ಮದ್ ಹ್ಯಾರಿಸ್ ಉಪಸ್ಥಿತರಿದ್ದರು.

ಆಡಳಿತ ಮಂಡಳಿ ಸದಸ್ಯ ಲಕ್ಷ್ಮೀನಾರಾಯಣರಾವ್ ಆತೂರು ಅಧ್ಯಕ್ಷತೆ ವಹಿಸಿದ್ದರು. ಪ್ರಾಂಶುಪಾಲ ಚಂದ್ರಶೇಖರ ಕೆ.ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ವಿದ್ಯಾರ್ಥಿನಿ ಕಶ್ವಿ ರೈ ವಂದಿಸಿದರು. ಉಪನ್ಯಾಸಕ ಚೇತನ್ ಆನೆಗುಂಡಿ ನಿರೂಪಿಸಿದರು. ದೈಹಿಕ ಶಿಕ್ಷಣ ಉಪನ್ಯಾಸಕ ಗಣೇಶ್ ಕೆ. ಸಹಕರಿಸಿದರು. ವಿದ್ಯಾರ್ಥಿನಿಯರಾದ ನಿಶ್ಮಾ ಮತ್ತು ಬಳಗದವರು ಪ್ರಾರ್ಥಿಸಿದರು.