ರಾಮಕುಂಜ ಕ.ಮಾ.ಪ್ರೌಢಶಾಲೆಯ ಬಾಲಕಿಯರ ತಂಡ ಪ್ರಥಮ, ಬಾಲಕರ ತಂಡ ದ್ವಿತೀಯ
ರಾಮಕುಂಜ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಪುತ್ತೂರು ಇದರ ಸಹಭಾಗಿತ್ವದಲ್ಲಿ ಸೈಂಟ್ ಮೇರಿಸ್ ಪ್ರೌಢಶಾಲೆ ಮರ್ದಾಳದಲ್ಲಿ ನಡೆದ ಕಡಬ ವಲಯ ಮಟ್ಟದ ೧೭ರ ವಯೋಮಾನದ ಬಾಲಕ ಹಾಗೂ ಬಾಲಕಿಯರ ಕಬಡ್ಡಿ ಪಂದ್ಯಾಟದಲ್ಲಿ ಶ್ರೀ ರಾಮಕುಂಜೇಶ್ವರ ಕನ್ನಡ ಮಾಧ್ಯಮ ಪ್ರೌಢಶಾಲೆಯ ಬಾಲಕಿಯರ ತಂಡ ಪ್ರಥಮ ಸ್ಥಾನ ಹಾಗೂ ಬಾಲಕರ ತಂಡ ದ್ವಿತೀಯ ಸ್ಥಾನ ಪಡೆದುಕೊಂಡು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದೆ.
ಬಾಲಕಿಯರ ವಿಭಾಗದಲ್ಲಿ ಶಾಲಾ ವಿದ್ಯಾರ್ಥಿನಿ ಸಿಂಚನ ಎಸ್ ಬೆಸ್ಟ್ ಡಿಫೆಂಡರ್ ಆಗಿ ಮತ್ತು ಧನ್ವಿ ಬೆಸ್ಟ್ ರೈಡರ್ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ. ಬಾಲಕರ ವಿಭಾಗದಲ್ಲಿ ವೈಭವ್ ಬೆಸ್ಟ್ ರೈಡರ್ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ. ವಿದ್ಯಾರ್ಥಿಗಳಿಗೆ ಮಾಧವ .ಬಿ.ಕೆ., ಜಸ್ವಂತ್ ಹಾಗೂ ಮಂಜುನಾಥ್ ಇವರು ತರಬೇತಿ ನೀಡಿದ್ದರು. ಶಾಲಾ ದೈಹಿಕ ಶಿಕ್ಷಣ ಶಿಕ್ಷಕಿ ಪ್ರಫುಲ್ಲ ರೈ ಹಾಗೂ ಶಾಲಾ ಮುಖ್ಯಗುರು ಸತೀಶ್ ಭಟ್ ಮಾರ್ಗದರ್ಶನ ನೀಡಿದ್ದರು.