ಸವಣೂರು: ಆ.30ಂದು ಕಡಬ ತಾಲೂಕು ಮಟ್ಟದ ದಸರಾ ಕ್ರೀಡಾಕೂಟದಲ್ಲಿ ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳ ಕಬಡ್ಡಿ ತಂಡ ತಾಲೂಕು ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ತೃತೀಯ ವಾಣಿಜ್ಯ ವಿಭಾಗದ ಸರಸ್ವತಿ ಡಿಸ್ಕಸ್ ತ್ರೋ ನಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.ಇವರಿಗೆ ಕಾಲೇಜಿನ ದೈಹಿಕ ಶಿಕ್ಷಕರು ಮಾರ್ಗದರ್ಶನವನ್ನು ನೀಡಿರುತ್ತಾರೆ. ಇವರನ್ನು ಕಾಲೇಜಿನ ಸಂಚಾಲಕರು, ಆಡಳಿತಾಧಿಕಾರಿಗಳು, ಪ್ರಾಂಶುಪಾಲರು, ಉಪನ್ಯಾಸಕವೃಂದದವರು, ಸಿಬ್ಬಂದಿ ವರ್ಗದವರು ಅಭಿನಂದಿಸಿದ್ದಾರೆ.