ಕಾಣಿಯೂರು ಪ್ರಗತಿಯ ಶ್ರೀಮಾ ಕೆ.ಎಚ್ ಯೋಗಾಸನ ಸ್ಪರ್ಧೆಯಲ್ಲಿ ವಿಭಾಗ ಮಟ್ಟಕ್ಕೆ

0

ಕಾಣಿಯೂರು: ದ.ಕ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ದಕ್ಷಿಣ ಕನ್ನಡ, ಮಂಗಳೂರು ಮಹಾನಗರ ಪಾಲಿಕೆ, ಜಿಲ್ಲಾ ಯುವಜನ ಒಕ್ಕೂಟ (ರಿ) ಹಾಗೂ ವಿವಿಧ ಸಂಘ-ಸಂಸ್ಥೆಗಳ ಆಶ್ರಯದಲ್ಲಿ ಮಂಗಳ ಕ್ರೀಡಾಂಗಣ ಮಂಗಳೂರಿನಲ್ಲಿ ನಡೆದ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಕಾಣಿಯೂರು ಪ್ರಗತಿ ವಿದ್ಯಾಸಂಸ್ಥೆಯ 9ನೇ ತರಗತಿ ವಿದ್ಯಾರ್ಥಿನಿ ಶ್ರೀಮಾ ಕೆ.ಎಚ್ ಸಾಂಪ್ರದಾಯಿಕ ಯೋಗಾಸನದಲ್ಲಿ ಪ್ರಥಮ ಸ್ಥಾನ, ಆರ್ಟಿಸ್ಟಿಕ್ ಸಿಂಗಲ್ ಯೋಗಾಸನದಲ್ಲಿ ಪ್ರಥಮ ಸ್ಥಾನ ಪಡೆದುಕೊಂಡು ವಿಭಾಗ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

ಇವರು ಸುಳ್ಯ ತಾಲೂಕಿನ ಮುರುಳ್ಯ ಗ್ರಾಮದ ಹುದೇರಿ ಕುಶಾಲಪ್ಪ ಗೌಡ ಮತ್ತು ಸುಜಿತಾ ದಂಪತಿಗಳ ಪುತ್ರಿ .ಇವರಿಗೆ ಸಂಸ್ಥೆಯ ಯೋಗ ಶಿಕ್ಷಕಿ ಶಶಿಕಲಾ ಕೆ ತರಬೇತು ನೀಡಿರುತ್ತಾರೆ.

LEAVE A REPLY

Please enter your comment!
Please enter your name here