ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ದಕ್ಷಿಣ ಕನ್ನಡ ಜಿಲ್ಲೆ, ಮಂಗಳೂರು ಮಹಾನಗರ ಪಾಲಿಕೆ, My Bharath ದಕ್ಷಿಣ ಕನ್ನಡ, ಜಿಲ್ಲಾ ಯುವಜನ ಒಕ್ಕೂಟ (ರಿ) ಹಾಗೂ ವಿವಿಧ ಸಂಘ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಮಂಗಳಾ ಕ್ರೀಡಾಂಗಣ, ಮಂಗಳೂರು ಇಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ 10ನೇ ತರಗತಿ ವಿದ್ಯಾರ್ಥಿನಿ ಜಿ.ಎಂ ಕೀರ್ತಿ ತ್ರಿವಿಧ ಜಿಗಿತದಲ್ಲಿ – ಪ್ರಥಮ, ಎತ್ತರ ಜಿಗಿತದಲ್ಲಿ – ಪ್ರಥಮ, 100ಮೀ ಹರ್ಡಲ್ಸ್ – ದ್ವಿತೀಯ ಮತ್ತು 4×100ಮೀ ರಿಲೇಯಲ್ಲಿ ತೃತೀಯ ಸ್ಥಾನ ಪಡೆದಿದ್ದಾರೆ.
ಭಾಗವಹಿಸಿದವರಲ್ಲಿ ಈಕೆ ಅತ್ಯಂತ ಕಿರಿಯಳಾಗಿದ್ದು, ಅವಳ ಈ ಸಾಧನೆಗೆ ಕ್ರೀಡಾಕೂಟದ ಆಯೋಜಕರು, ಶಾಲಾ ಆಡಳಿತ ಮಂಡಳಿ, ಶಾಲಾ ಮುಖ್ಯಗುರುಗಳು ಹಾಗೂ ಶಿಕ್ಷಕ ವೃಂದ ಅಭಿನಂದನೆ ಸಲ್ಲಿಸಿದ್ದಾರೆ. ಇವಳಿಗೆ ವಿವೇಕಾನಂದ ತಾಂತ್ರಿಕ ಮಹಾವಿದ್ಯಾಲಯದ ದೈಹಿಕ ನಿರ್ದೇಶಕ ಬಾಲಚಂದ್ರ, ಶಾಲಾ ದೈಹಿಕ ಶಿಕ್ಷಕ ದಾಮೋದರ್, ಹರಿಣಾಕ್ಷಿ ಮತ್ತು ಅಶ್ವಿತಾ ತರಬೇತಿ ನೀಡಿದ್ದರು.