ನೆಲ್ಯಾಡಿ: ನೆಲ್ಯಾಡಿ ಜೆಸಿಐ ವತಿಯಿಂದ ಗಾಂಧಿ ಮೈದಾನದಲ್ಲಿ ಜೇಸಿ ಹಾಗೂ ಜೇಸಿಯೇತರ ಬಂಧುಗಳಿಗಾಗಿ ಕ್ರೀಡಾಕೂಟ ಸೆ.7ರಂದು ನಡೆಯಿತು.
ಕಾರ್ಯಕ್ರಮವನ್ನು ನೆಲ್ಯಾಡಿ ಹೊರಾಠಾಣೆಯ ಠಾಣಾಧಿಕಾರಿ ಪ್ರವೀಣ್ ಕುಮಾರ್ ದೀಪ ಪ್ರಜ್ವಲಿಸಿ ಉದ್ಘಾಟಿಸಿ ಮಾತನಾಡಿ, “ಜೆಸಿಐ ಸಂಸ್ಥೆಯು ಸಮಾಜಮುಖಿ ಕಾರ್ಯಗಳ ಮೂಲಕ ಜನರಲ್ಲಿ ಜಾಗೃತಿ ಮೂಡಿಸುತ್ತಿದ್ದು, ಸಮಾಜದ ಪ್ರತಿಯೊಂದು ಕ್ಷೇತ್ರದಲ್ಲಿಯೂ ತನ್ನದೇ ಆದ ಗುರುತನ್ನು ಸ್ಥಾಪಿಸಿಕೊಂಡಿದೆ. ಇಂತಹ ಕ್ರೀಡಾಕೂಟಗಳು ಸಾರ್ವಜನಿಕರಲ್ಲಿ ಸ್ನೇಹ-ಸೌಹಾರ್ದತೆಯನ್ನು ಬೆಳೆಸಲು ನೆರವಾಗುತ್ತವೆ” ಎಂದು ಹೇಳಿದರು.
ಜೆಸಿಐ ವಲಯ ಸಂಯೋಜಕರಾದ ವೀನಿತ್ ಶಗ್ರಿತ್ತಾಯ ಮಾತನಾಡಿ, “ಜೆಸಿಐ ಸಂಸ್ಥೆಯಲ್ಲಿ ಯುವಕರು ಸೇರುವುದರಿಂದ ಸಮಾಜ ಸೇವೆಯೊಂದಿಗೆ ತಮ್ಮ ವ್ಯಕ್ತಿತ್ವ ವಿಕಸನಕ್ಕೂ ಉತ್ತಮ ವೇದಿಕೆಯಾಗಿ ಪರಿಣಮಿಸುತ್ತದೆ. ಸಾರ್ವಜನಿಕ ಕಾರ್ಯಗಳೊಂದಿಗೆ ಕ್ರೀಡಾಕೂಟವನ್ನೂ ಆಯೋಜಿಸಿರುವುದು ನೆಲ್ಯಾಡಿ ಜೆಸಿಐಗೆ ಹೆಮ್ಮೆಯ ವಿಷಯ” ಎಂದರು.
ಕಾರ್ಯಕ್ರಮದಲ್ಲಿ ನೆಲ್ಯಾಡಿ ಗ್ರಾ.ಪಂ.ಅಧ್ಯಕ್ಷ ಸಲಾಂ ಬಿಲಾಲ್, ಕೌಕ್ರಾಡಿ ಗ್ರಾ.ಪಂ. ಅಧ್ಯಕ್ಷ ಉದಯಕುಮಾರ್ ದೋಂತಿಲ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಸರ್ವೋತ್ತಮ ಗೌಡ, ನೆಲ್ಯಾಡಿ-ಕೌಕ್ರಾಡಿ ವರ್ತಕ ಹಾಗೂ ಕೈಗಾರಿಕಾ ಸಂಘದ ಅಧ್ಯಕ್ಷ ಸತೀಶ್ ಭಟ್, ನೆಲ್ಯಾಡಿ ಜೆಸಿಐ ನಿಕಟ ಪೂರ್ವ ಅಧ್ಯಕ್ಷೆ ಸುಚಿತ್ರ ಜೆ. ಬಂಟ್ರಿಯಾಲ್, ಮಹಿಳಾ ಜೇಸಿ ಅಧ್ಯಕ್ಷೆ ಪ್ರವೀಣಿ ಸುಧಾಕರ್, ಪೂರ್ವಾಧ್ಯಕ್ಷರುಗಳಾದ ರವಿಚಂದ್ರ ಹೊಸವಕ್ಲು, ದಯಾಕರ.ರೈ ಮೊದಲಾದ ಗಣ್ಯರು ಉಪಸ್ಥಿತರಿದ್ದರು.
ಪ್ರವೀಣಿ ಸುಧಾಕರ್ ಜೇಸಿವಾಣಿ ವಾಚಿಸಿದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ನೆಲ್ಯಾಡಿ ಜೆಸಿಐ ಅಧ್ಯಕ್ಷ ಡಾ.ಸುಧಾಕರ ಶೆಟ್ಟಿ ವಹಿಸಿ ಸ್ವಾಗತಿಸಿದರು. ಜಯಾನಂದ ಬಂಟ್ರಿಯಾಲ್ ಕಾರ್ಯಕ್ರಮವನ್ನು ನಿರೂಪಿಸಿದರು. ಲೀಲಾ ಮೋಹನ್ ವಂದಿಸಿದರು.
ಸಭಾ ಕಾರ್ಯಕ್ರಮದ ಬಳಿಕ ವಿವಿಧ ರೀತಿಯ ಆಟೋಟ ಸ್ಪರ್ಧೆಗಳು ಜೇಸಿ ಹಾಗೂ ಜೇಸಿಯೇತರ ಬಂಧುಗಳಿಗಾಗಿ ನಡೆಸಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ನಿವೃತ್ತ ದೈಹಿಕ ಶಿಕ್ಷಕರಾದ ಜನಾರ್ದನ ಟಿ., ಉಲಹನ್ನನ್ ಹಾಗೂ ದೀಪಕ್, ಸಂದೇಶ್ ಮೊದಲಾದವರು ತೀರ್ಪುಗಾರರಾಗಿ ಸಹಕರಿಸಿದರು. ಸುರೇಶ್ ಪಡಿಪಂಡ ಕ್ರೀಡಾಕೂಟವನ್ನು ನಿರೂಪಿಸಿದರು.