ಪುತ್ತೂರು: ಧರ್ಮ ದೈವಗಳು ನೆಲೆಸಿರುವ ತಾಲೂಕಿನ ಅತ್ಯಂತ ಕಾರಣಿಕ ಕ್ಷೇತ್ರವಾಗಿರುವ ಆರ್ಯಾಪು ಗ್ರಾಮದ ಶ್ರೀ ಕ್ಷೇತ್ರ ಕೂರೇಲು ಶ್ರೀ ಮಲರಾಯ ದೈವಸ್ಥಾನದಲ್ಲಿ ನಡೆದ ಶ್ರೀ ದೈವಗಳ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಮಹೋತ್ಸವ ದಿನದ ಅಂಗವಾಗಿ ಶ್ರೀ ಕ್ಷೇತ್ರ ಕೂರೇಲು ಶ್ರೀ ಮಲರಾಯ ದೈವಸ್ಥಾನದಲ್ಲಿ ಶ್ರೀ ದೈವಗಳಿಗೆ ವಿಶೇಷ ತಂಬಿಲ ಸೇವೆ, ಕೂರೇಲು ತರವಾಡು ಮನೆಯ ಧರ್ಮದೈವಗಳಿಗೆ ವಿಶೇಷ ಮಹಾಪೂಜೆ, ಮಹಾಮಂಗಳಾರತಿ ಕಾರ್ಯಕ್ರಮ ಸೆ.12 ರಂದು ಬೆಳಿಗ್ಗೆ ಗಂಟೆ 6.30 ಕ್ಕೆ ನಡೆಯಲಿದೆ. ಕೂರೇಲು ಕುಟುಂಬಸ್ಥರು, ಹಿತೈಷಿಗಳು, ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಶ್ರೀ ಕ್ಷೇತ್ರ ಕೂರೇಲು ಶ್ರೀ ಮಲರಾಯ ದೈವಸ್ಥಾನದ ಆಡಳಿತ ಮೊಕ್ತೇಸರ ಕೆ.ಸಂಜೀವ ಪೂಜಾರಿ ಕೂರೇಲುರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.