ಪುತ್ತೂರು: ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಪುತ್ತೂರು ಹಾಗೂ ಪ್ರತಿಭಾ ಅನುದಾನಿತ ಪ್ರೌಢಶಾಲೆ ಪಟ್ಟೆ ಇವರ ಸಹಯೋಗದೊಂದಿಗೆ ನಡೆದ ತಾಲೂಕು ಮಟ್ಟದ 17 ವರ್ಷದ ಬಾಲಕರ ವಾಲಿಬಾಲ್ ಪಂದ್ಯಾಟದಲ್ಲಿ ದರ್ಬೆಯ ಬೆಥನಿ ಆಂಗ್ಲ ಮಾಧ್ಯಮ ಶಾಲೆಯ ತಂಡವು ಪ್ರಥಮ ಸ್ಥಾನವನ್ನು ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದೆ.
ದೈಹಿಕ ಶಿಕ್ಷಣ ಶಿಕ್ಷಕರಾದ ಹರೀಶ್ ತರಬೇತಿ ನೀಡಿರುತ್ತಾರೆ.