ರಾಮಕುಂಜ ಆ.ಮಾ.ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ

0

ರಾಮಕುಂಜ: ಶ್ರೀ ರಾಮಕುಂಜೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸರ್ವಪಲ್ಲಿ ರಾಧಾಕೃಷ್ಣನ್‌ರವರ ಜನ್ಮ ದಿನವಾದ ಸೆ.5ರಂದು ಶಿಕ್ಷಕರ ದಿನಾಚರಣೆಯನ್ನು ಸಡಗರದಿಂದ ಆಚರಿಸಲಾಯಿತು.


ಸಂಸ್ಥೆಯ ಕಾರ‍್ಯದರ್ಶಿ ಕೆ.ಸೇಸಪ್ಪ ರೈಯವರು ಸರ್ವಪಲ್ಲಿ ರಾಧಾಕೃಷ್ಣನ್‌ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು, ಅಧ್ಯಾಪಕ ವೃತ್ತಿಯ ಶ್ರೇಷ್ಟತೆಯನ್ನು ತಿಳಿಸುತ್ತಾ, ವಿದ್ಯಾರ್ಥಿಗಳೆಲ್ಲರೂ ಏಕಾಗ್ರತೆಯಿಂದ ಅಧ್ಯಯನ ಮಾಡಿ ಉತ್ತಮ ವಿದ್ಯಾರ್ಥಿಗಳಾಗಬೇಕೆಂದು ತಿಳಿಸಿದರು. ಸಂಸ್ಥೆಯ ಆಡಳಿತಾಧಿಕಾರಿ ಆನಂದ ಎಸ್.ಟಿ.ಸಂದರ್ಭೋಚಿತವಾಗಿ ಮಾತನಾಡಿದರು. ಸಂಸ್ಥೆಯ ಶಿಕ್ಷಕ-ಶಿಕ್ಷಕೇತರ ವೃಂದದವರಿಗೆ ವಿದ್ಯಾರ್ಥಿಗಳು ವಿವಿಧ ಆಟೋಟ ಸ್ಪರ್ಧೆಗಳನ್ನು ಏರ್ಪಡಿಸಿ ಬಹುಮಾನವನ್ನು ವಿತರಿಸಿದರು. ಸಹಶಿಕ್ಷಕಿ ನಯನಾ, ವಿದ್ಯಾರ್ಥಿಗಳಾದ ಅಕ್ಷಯ್, ಹರಿತ್, ಹರ್ಷಿಕ, ಮಾನ್ಯಶ್ರೀ ಶಿಕ್ಷಕರ ದಿನಾಚರಣೆಯ ಮಹತ್ವ ಹಾಗೂ ಆದರ್ಶ ಶಿಕ್ಷಕ ಸರ್ವಪಳ್ಳಿ ರಾಧಾಕೃಷ್ಣನ್‌ರವರ ಗುಣಗಾನ ಮಾಡಿದರು. ವಿದ್ಯಾಥಿಗಳು ಸುಶ್ರಾವ್ಯ ಹಾಡಿನ ಮೂಲಕ ರಂಜಿಸಿದರು.


ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯಿನಿ ಲೋಹಿತ ಎ, ಸಂಸ್ಥೆಯ ಶಿಕ್ಷಕ ಶಿಕ್ಷಕೇತರ ಸಿಬ್ಬಂದಿಯವರು ಉಪಸ್ಥಿತರಿದ್ದರು. ಸಂಸ್ಥೆಯ ವ್ಯವಸ್ಥಾಪಕ ರಮೇಶ್ ರೈ, ಪ್ರೌಢಶಾಲಾ ಮುಖ್ಯೋಪಾಧ್ಯಾಯಿನಿ ಗಾಯತ್ರಿ ಯು.ಎನ್.ಮಾರ್ಗದರ್ಶನಗೈದರು. ಸಹಶಿಕ್ಷಕಿಯರಾದ ದಿವ್ಯಾ ಜಿ. ಹಾಗೂ ಸಂಧ್ಯಾ ಕಾರ್ಯಕ್ರಮ ಸಂಘಟಿಸಿದ್ದರು. ಹತ್ತನೇ ತರಗತಿ ವಿದ್ಯಾರ್ಥಿನಿಯರಾದ ವಂಶಿ ಹಾಗೂ ಶಾರ್ವರಿ ಕೆ ರೈ ಕಾರ್ಯಕ್ರಮ ನಿರೂಪಿಸಿದರು. 10ನೇ ತರಗತಿಯ ವಿದ್ಯಾರ್ಥಿ ರಕ್ಷಾ ಡಿ.ಸ್ವಾಗತಿಸಿ, ಅನ್ವೇಷ್ ವಂದಿಸಿದರು. ಸಂಸ್ಥೆಯ ಶಿಕ್ಷಕ-ಶಿಕ್ಷಕೇತರ ವೃಂದದವರು ಸಹಕರಿಸಿದರು. ಕಾರ್ಯಕ್ರಮದ ಕೊನೆಗೆ ಎಲ್ಲರಿಗೂ ಸಿಹಿತಿಂಡಿ ಹಂಚಲಾಯಿತು.

LEAVE A REPLY

Please enter your comment!
Please enter your name here