ರಾಮಕುಂಜ ಆ.ಮಾ.ಶಾಲಾ ವಿದ್ಯಾರ್ಥಿನಿ ರಕ್ಷಾ ಡಿ.ಯವರಿಂದ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್

0

ರಾಮಕುಂಜ: ಇಲ್ಲಿನ ಶ್ರೀ ರಾಮಕುಂಜೇಶ್ವರ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಹತ್ತನೇ ತರಗತಿ ವಿದ್ಯಾರ್ಥಿನಿ ರಕ್ಷಾ ಡಿ. ತನ್ನ ವಿಶಿಷ್ಟ ಸಾಧನೆಯ ಮೂಲಕ ವಿಶ್ವದಾಖಲೆ ನಿರ್ಮಿಸಿದ್ದಾರೆ.
ಇವರು ತನ್ನ ಕೈಯನ್ನು ಸೊಂಟದಲ್ಲಿ ಹಿಡಿದುಕೊಂಡು ನಿಮಿಷಕ್ಕೆ 179 ಸಲ ಮುಂಗೈಯನ್ನು ಹಿಂದಕ್ಕೆ ಹಾಗೂ ಮುಂದಕ್ಕೆ ಮುಟ್ಟಿಸುವುದರ ಮೂಲಕ ಅತ್ಯಂತ ಕ್ಲಿಷ್ಟಕರವಾದ ಸಾಧನೆಗೈದು ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಮಾಡಿದ್ದಾರೆ. ಇವರು ಈಗಾಗಲೇ ಕರ್ನಾಟಕ ಅಚೀವರ್ಸ್ ಬುಕ್ ಆಫ್ ರೆಕಾರ್ಡ್ಸ್ ಹಾಗೂ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್‌ನಲ್ಲಿ ಪ್ರಶಸ್ತಿ ಹಾಗೂ ಪದಕ ಪಡೆದುಕೊಂಡಿದ್ದಾರೆ.


ಇವರ ವಿಶಿಷ್ಟ ಸಾಧನೆಗೆ ಸಂಸ್ಥೆಯ ಕಾರ್ಯದರ್ಶಿ ಕೆ.ಸೇಸಪ್ಪ ರೈ, ಆಡಳಿತ ಅಧಿಕಾರಿ ಆನಂದ ಎಸ್.ಟಿ., ವ್ಯವಸ್ಥಾಪಕ ರಮೇಶ್ ರೈ, ಪ್ರೌಢಶಾಲಾ ಮುಖ್ಯೋಪಾಧ್ಯಾಯನಿ ಗಾಯತ್ರಿ ಯು.ಎನ್., ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯನಿ ಲೋಹಿತಾ ಎ, ಶಿಕ್ಷಕ- ಶಿಕ್ಷಕೇತರ ವೃಂದದವರು ಶುಭ ಹಾರೈಸಿದ್ದಾರೆ. ಇವರು ಬೆಳ್ತಂಗಡಿ ತಾಲೂಕಿನ ಬಾರ್ಯ ಗ್ರಾಮದ ಅದಮ ನಿವಾಸಿ ಧರ್ಣಪ್ಪ ಪೂಜಾರಿ ಮತ್ತು ವನಿತಾ ದಂಪತಿಯ ಪುತ್ರಿ.

LEAVE A REPLY

Please enter your comment!
Please enter your name here