ರಾಮಕುಂಜ: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ ದ.ಕ.ಜಿಲ್ಲೆ ಮಂಗಳೂರು ಹಾಗೂ ವಾಣಿ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿ ಇವರ ಸಹಯೋಗದಲ್ಲಿ ಸೆ.6ರಂದು ನಡೆದ 14ರ ವಯೋಮಾನದ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ ಜಿಲ್ಲಾ ಮಟ್ಟದ ಚೆಸ್ ಪಂದ್ಯಾಟದಲ್ಲಿ ಶ್ರೀ ರಾಮಕುಂಜೇಶ್ವರ ಆಂಗ್ಲ ಮಾಧ್ಯಮ ಶಾಲೆಯ 8ನೇ ತರಗತಿಯ ವಿದ್ಯಾರ್ಥಿನಿ ರುತ್ವಿ ಎ.ಜೆ. 5ನೇ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಇವರಿಗೆ ಸಂಸ್ಥೆಯ ಕಾರ್ಯದರ್ಶಿ ಕೆ.ಸೇಸಪ್ಪ ರೈ, ಸಂಸ್ಥೆಯ ಆಡಳಿತಾಧಿಕಾರಿ ಆನಂದ ಎಸ್.ಟಿ., ವ್ಯವಸ್ಥಾಪಕ ರಮೇಶ್ ರೈ ಆರ್.ಬಿ.,ಪ್ರೌಢಶಾಲಾ ಮುಖ್ಯೋಪಾಧ್ಯಾಯಿನಿ ಗಾಯತ್ರಿ ಯು.ಎನ್., ಪ್ರಾಥಮಿಕ ಶಾಲಾ ಮುಖ್ಯೋಪಾದ್ಯಾಯಿನಿ ಲೋಹಿತಾ ಎ, ಶಿಕ್ಷಕ-ಶಿಕ್ಷಕೇತರ ವೃಂದದವರು ಶುಭ ಹಾರೈಸಿದ್ದಾರೆ. ಇವರು ರಾಮಕುಂಜ ನಿವಾಸಿ ಜಯಪ್ರಕಾಶ್ ಹಾಗೂ ಲತಾ ದಂಪತಿಯ ಪುತ್ರಿ.