ವಿಟ್ಲ: ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಾಣಿ ಸಮೀಪದ ಬುಡೋಳಿಯಲ್ಲಿ ಹೆದ್ದಾರಿಯಿಂದ ಕಾರೊಂದು ಕಂದಕಕ್ಕೆ ಉರುಳಿ ನಾಲ್ವರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.
ಮಂಗಳೂರಿಗೆ ಬರುತ್ತಿದ್ದ ಸ್ವಿಫ್ಟ್ ಕಾರು ಬುಡೋಳಿಯಲ್ಲಿ ಚಾಲಕನ ನಿಯಂತ್ರಣ ಕಳೆದುಕೊಂಡು ಪಲ್ಟಿಯಾಗಿದೆ. ಮಾಹಿತಿ ತಿಳಿದ ತಕ್ಷಣ ಮಾಣಿ ಸೋಷಿಯಲ್ ಇಕ್ವಾ ಆಂಬುಲೆನ್ಸ್ ಮೂಲಕ ಗಾಯಾಳುಗಳನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇಬ್ಬರು ಗಾಯಾಳುಗಳ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ.