ಪುತ್ತೂರು: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರಶಿಕ್ಷಣಾಧಿಕಾರಿಗಳ ಕಚೇರಿ ಪುತ್ತೂರು ಹಾಗೂ ಸಂತ ಫಿಲೋಮಿನಾ ಪ್ರೌಢಶಾಲೆ, ದರ್ಬೆ ಪುತ್ತೂರು ಇವರ ಸಂಯುಕ್ತ ಆಶ್ರಯದಲ್ಲಿ ಸೆ.6 ರಂದು ನಡೆದ ತಾಲೂಕು ಮಟ್ಟದ 14 ವರ್ಷ ವಯೋಮಾನದ ಬಾಲಕಿಯರ ಫುಟ್ಬಾಲ್ ಪಂದ್ಯಾಟದಲ್ಲಿ ಪುತ್ತೂರು ಮಾಯ್ ದೆ ದೇವುಸ್ ಶಾಲೆಯ ಬಾಲಕಿಯರ ತಂಡವು ಪ್ರಥಮ ಸ್ಥಾನವನ್ನು ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
