ಅಕ್ಷಯ ಕಾಲೇಜಿನಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ-ಜಿಮ್ ಉದ್ಘಾಟನೆ

0

ಪುತ್ತೂರು: ಅಕ್ಷಯ ಎಜ್ಯುಕೇಶನಲ್  ಚಾರಿಟೇಬಲ್ ಟ್ರಸ್ಟ್ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಸಮೂಹ ಶಿಕ್ಷಣ ಸಂಸ್ಥೆಗಳ ಅಕ್ಷಯ ಪದವಿ ಕಾಲೇಜಿನಲ್ಲಿ ರಾಷ್ಟ್ರೀಯ  ಕ್ರೀಡಾ ದಿನಾಚರಣೆ ಮತ್ತು ಕಾಲೇಜಿನ ನೂತನ ಜಿಮ್ ನ  ಉದ್ಘಾಟನಾ ಕಾರ್ಯಕ್ರಮ ಕಾಲೇಜಿನ ಸಭಾಂಗಣದಲ್ಲಿ ಜರುಗಿತು.   

ಕಾಲೇಜಿನ ನೂತನ ಜಿಮ್ ಕೇಂದ್ರವನ್ನು ರಾಷ್ಟ್ರೀಯ ಮಟ್ಟದ ಪ್ರಮೋದ್ ಕುಮಾರ್ ಶೆಟ್ಟಿ, ರಾಷ್ಟ್ರೀಯ ಮಟ್ಟದ ವೇಟ್‍ಲಿಫ್ಟಿಂಗ್ ತರಬೇತುದಾರ ಮತ್ತು ಅಂತರ್ರಾಷ್ಟ್ರೀಯ ಮಟ್ಟದ ವೇಟ್‍ಲಿಫ್ಟಿಂಗ್ ತೀರ್ಪುಗಾರರಾದ ಪ್ರಮೋದ್ ಕುಮಾರ್ ರವರು   ಉದ್ಘಾಟಿಸಿ ಶುಭ ಹಾರೈಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಅಕ್ಷಯ ಸಮೂಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಜಯಂತ್  ನಡುಬೈಲ್ ಮಾತನಾಡಿ, ವಿದ್ಯಾರ್ಥಿಗಳಿಗೆ  ಕ್ರೀಡಾಕ್ಷೇತ್ರದಲ್ಲಿ ತಮ್ಮ ಪ್ರತಿಭೆಯನ್ನು  ಅನಾವರಣಗೊಳಿಸಲು ಪೂರಕ ವಾಗುವಂತೆ ಜಿಮ್ ಸಹಿತ ಬೇಕಾದ ಸಿದ್ಧತೆಗಳನ್ನು ಯಥಾವತ್ತಾಗಿ ಮಾಡಲಾಗುವುದು. ಪಠ್ಯಗಳ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಸೂಕ್ತ  ಅವಕಾಶವನ್ನು ನೀಡಿದರೆ  ಮಾತ್ರ ನಿರೀಕ್ಷಿತ ಮಟ್ಟದಲ್ಲಿ  ಯಶಸ್ಸು ಗಳಿಸಲು ಸಾಧ್ಯ ಎಂದರು.

ಮುಖ್ಯ ಅತಿಥಿಗಳಾಗಿ ಪುತ್ತೂರು ನಗರಸಭಾ ಉಪಾಧ್ಯಕ್ಷ ಹಾಗೂ ಮಿತ್ರವೃಂದ ವಾಲಿಬಾಲ್ ಅಕಾಡೆಮಿ ಕಾರ್ಯದರ್ಶಿ ಬಾಲಚಂದ್ರ ಕೆಮ್ಮಿoಜೆ, ಮಿತ್ರವೃಂದ ವಾಲಿಬಾಲ್ ಅಕಾಡೆಮಿ ಅಧ್ಯಕ್ಷ  ಪಿ.ವಿ ಕೃಷ್ಣನ್, ಕಾಲೇಜಿನ ಆಡಳಿತ ಮಂಡಳಿ ಸದಸ್ಯ ಪಿ.ವಿ ನಾರಾಯಣನ್ ಉಪಸ್ಥಿತರಿದ್ದರು.

 ರಾಷ್ಟ್ರೀಯ ಕ್ರೀಡಾ ದಿನಾಚರಣೆ ಮತ್ತು ನೂತನ ಜಿಮ್  ಬಗ್ಗೆ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ನವೀನ್ ಎಸ್ ರವರು ಪ್ರಾಸ್ತಾವಿಕವಾಗಿ ಮಾತನಾಡಿದರು. ದ್ವಿತೀಯ ಫ್ಯಾಶನ್ ಡಿಸೈನ್ ವಿದ್ಯಾರ್ಥಿನಿಯರಾದ ದೇವಿಕಾ ಹಾಗೂ ಸ್ವರ್ಣ ಪ್ರಾರ್ಥಿಸಿದರು. ಕ್ರೀಡಾ ಜೊತೆ ಕಾರ್ಯದರ್ಶಿ ದ್ವಿತೀಯ ಬಿಕಾಂನ ಆಶಿಕಾ ಎನ್ ಸ್ವಾಗತಿಸಿ, ಪ್ರಥಮ ಬಿಎಯ ಪ್ರತೀಕ್ಷಾ ವಂದಿಸಿದರು. ದ್ವಿತೀಯ ಫ್ಯಾಶನ್ ಡಿಸೈನ್ ವಿದ್ಯಾರ್ಥಿನಿ ಮೋಕ್ಷ ಕಾರ್ಯಕ್ರಮ ನಿರೂಪಿಸಿದರು.

ಈ ಸಂದರ್ಭದಲ್ಲಿ ಮಿತ್ರವೃಂದ ವಾಲಿಬಾಲ್ ಅಕಾಡೆಮಿಯಿಂದ ರಾಜ್ಯಮಟ್ಟದ ವಾಲಿಬಾಲ್ ಆಟಗಾರ್ತಿ ಪ್ರಥಮ ಬಿಎ ವಿದ್ಯಾರ್ಥಿನಿ ದೀಕ್ಷಿತರವರಿಗೆ ಸ್ಕಾಲರ್ಶಿಪ್ ನೀಡಲಾಯಿತು.

LEAVE A REPLY

Please enter your comment!
Please enter your name here