ಆಲಂಕಾರು: ಶರವೂರು ದುರ್ಗಾಪರಮೇಶ್ವರಿ ದೇವಸ್ಥಾನದ ಜೀರ್ಣೋದ್ಧಾರ ಕೆಲಸ ಕಾರ್ಯಗಳು ಭರದಿಂದ ಸಾಗುತ್ತಿದ್ದು,ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾದ ಹೇಮಂತ್ ರೈ ಮನವಳಿಕೆ ಗುತ್ತು ಹಾಗೂ ಪುಣಚ ಮಹಿಷಮರ್ದಿನಿ ದೇವಸ್ಥಾನದ ಅಧ್ಯಕ್ಷ ಬೈಲುಗುತ್ತು ಮಾರಪ್ಪ ಶೆಟ್ಟಿಯವರು ಸಭಾಪತಿ ಯು.ಟಿ ಖಾದರ್ ರವರನ್ನು ಭೇಟಿ ಮಾಡಿ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ರವರನ್ನು ಬೆಂಗಳೂರಿನ ಅವರ ನಿವಾಸ ಕೃಷ್ಣಾ ದಲ್ಲಿ ಭೇಟಿಯಾಗಿ ಶರವೂರು ದುರ್ಗಾಪರಮೇಶ್ವರಿ ದೇವಸ್ಥಾನದ ಸಮಗ್ರ ಜೀರ್ಣೋದ್ಧಾರದ ಬಗ್ಗೆ ಮಾಹಿತಿಯನ್ನು ಕೊಟ್ಟು, ಸರಕಾರದ ವತಿಯಿಂದ ಕ್ಷೇತ್ರಕ್ಕೆ ಗರಿಷ್ಠ ಅನುದಾನವನ್ನು ನೀಡುವಂತೆ ವಿನಂತಿಸಿದರು.

ಈ ಬೇಡಿಕೆಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಮುಖ್ಯಮಂತ್ರಿಯವರು ಸರಕಾರದ ವತಿಯಿಂದ ಸಹಕಾರ ನೀಡುವುದಾಗಿ ಭರವಸೆ ನೀಡಿದ್ದಾರೆ ಎಂದು ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾದ ಡಾ.ಹೇಮಂತ್ ರೈ ಮನವಳಿಕೆಗುತ್ತು ಮತ್ತು ಮಾರಪ್ಪ ಶೆಟ್ಟಿ ಬೈಲುಗುತ್ತು ತಿಳಿಸಿದ್ದಾರೆ.