ಆಲಂಕಾರು: ಶರವೂರು ದುರ್ಗಾಪರಮೇಶ್ವರಿ ದೇವಸ್ಥಾನದ ಜೀರ್ಣೋದ್ಧಾರದ ಕೆಲಸ ಭರದಿಂದ ಸಾಗುತ್ತಿದ್ದು, ದೇವಸ್ಥಾನಕ್ಕೆ ಅನುದಾನ ನೀಡುವಂತೆ ಕ್ಷೇತ್ರದ ವತಿಯಿಂದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಯವರ ಚಾರ್ವಾಕದ ನಿವಾಸಕ್ಕೆ ತೆರಳಿ ಮನವಿ ಸಲ್ಲಿಸಲಾಯಿತು.

ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಹೇಮಂತ್ ರೈ ಮನವಳಿಕೆಗುತ್ತು ಮನವಿ ಸಲ್ಲಿಸಿದರು. ಇದಕ್ಕೆ ಪ್ರತಿಕ್ರಿಯೆ ನೀಡಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಯವರು ದೇವಸ್ಥಾನದ ಕೆರೆ ಅಭಿವೃದ್ಧಿ ಹಾಗೂ ಇತರ ಕಾಮಗಾರಿಗಳಗೆ ವಿವಿಧ ಮೂಲಗಳಿಂದ ಅನುದಾನ ಕ್ರೂಡೀಕರಿಸಿ ನೀಡುವುದಾಗಿ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಸುಬ್ರಹ್ಮಣ್ಯ ರಾವ್ ನಗ್ರಿ, ಮಾಜಿ ಅಧ್ಯಕ್ಷರಾದ ಗೋಪಾಲಕೃಷ್ಣ ಪಡ್ಡಿಲ್ಲಾಯ, ವ್ಯವಸ್ಥಾಪನ ಸಮಿತಿಯ ಸದಸ್ಯರಾದ ರಾಧಾಕೃಷ್ಣ ರೈ ಪರಾರಿಗುತ್ತು, ವಾಸಪ್ಪ ಗೌಡ ಕೆದ್ದೊಟ್ಟೆ, ಕಡಬ ಉಪತಹಶೀಲ್ದರಾದ ಗೋಪಾಲ.ಕೆ, ಜೀರ್ಣೋದ್ಧಾರ ಸಮಿತಿಯ ಸದಸ್ಯರಾದ ಸದಾನಂದ ಮಡ್ಯೊಟ್ಟು, ಪ್ರಮುಖರಾದ ಲಕ್ಷ್ಮಣ ಗೌಡ
ಕರಂದ್ಲಾಜೆ ಮತ್ತಿತರರು ಉಪಸ್ಥಿತರಿದ್ದರು.