ಪುತ್ತೂರು: ರಸ್ತೆ ಬದಿ ಬಿದ್ದು ಗಾಯಗೊಂಡಿದ್ದ ವ್ಯಕ್ತಿಯೋರ್ವರಿಗೆ ಸಂಪ್ಯ ಪೊಲೀಸ್ ಠಾಣೆಯ ಎಸ್.ಐ ಜಂಬೂರಾಜ್ ಮಹಾಜನ್ ಅವರು ಪ್ರಥಮ ಚಿಕಿತ್ಸೆ ನೀಡಿ ಉಪಚರಿಸಿರುವ ಮೂಲಕ ಮಾನವೀಯತೆ ಮೆರೆದಿದ್ದಾರೆ.
ಸಂಪ್ಯ ಠಾಣಾ ಎಸ್.ಐ ಜಂಬೂರಾಜ್ ಮಹಾಜನ್ ಹಾಗೂ ಸಿಬ್ಬಂದಿಗಳು ಗಡಿಭಾಗವಾದ ನೆಟ್ಟಣಿಗೆ ಮುಡ್ನೂರು ಗ್ರಾಮದ ಗಾಳಿಮುಖದಲ್ಲಿ ಕರ್ತವ್ಯದಲ್ಲಿದ್ದರು. ಇದೇ ವೇಳೆ ಗಾಳಿಮುಖದಲ್ಲಿ ರಸ್ತೆ ಬದಿ ವ್ಯಕ್ತಿ ಬಿದ್ದು ಒದ್ದಾಡುತ್ತಿರುವುದು ಗಮನಕ್ಕೆ ಬಂದಿದೆ.
ಕೂಡಲೇ ತನ್ನ ವಾಹನ ನಿಲ್ಲಿಸಿ ಆ ವ್ಯಕ್ತಿಯನ್ನು ವಿಚಾರಿಸಿದಾಗ ಕಾಲಿಗೆ ಗಾಯಗೊಂಡಿರುವುದು ಕಂಡು ಬಂದಿದೆ. ವ್ಯಕ್ತಿಯನ್ನು ಉಪಚರಿಸಿ, ಸ್ಥಳದಲ್ಲೇ ವ್ಯಕ್ತಿಗ ಪ್ರಥಮ ಚಿಕಿತ್ಸೆ ನೀಡಿ ಬಳಿಕ ಪುತ್ತೂರು ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಎಸ್.ಐ ಜಂಬೂರಾಜ್ ಮಹಾಜನ್ ರವರ ಮಾನವೀಯ ಕಾರ್ಯಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ.