ಪುತ್ತೂರು: ದೀನ್ ದಯಾಳ್ ಅಂತ್ಯೋದಯ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ ಯೋಜನೆ ಅಡಿಯಲ್ಲಿ ಅನುಷ್ಠಾನಗೊಂಡ ನರಿಮೊಗರು ಶ್ರೀ ದುರ್ಗಾ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ಇದರ 2024 – 2025 ನೇ ಸಾಲಿನ ವಾರ್ಷಿಕ ಮಹಾ ಸಭೆಯು ಸೆ.9ರಂದು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.

ಒಕ್ಕೂಟದ ಅಧ್ಯಕ್ಷೆ ಪೂರ್ಣಿಮಾ ಅಧ್ಯಕ್ಷತೆ ವಹಿಸಿದ್ದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ರವಿಚಂದ್ರ ಯು ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿ ಗ್ರಾಮ ಪಂಚಾಯತ್ ಸ್ವಚ್ಛತಾ ಕಾರ್ಯದಲ್ಲಿ ಒಕ್ಕೂಟವು ನಿರ್ವಹಿಸುತ್ತಿರುವ ಕೆಲಸದ ಬಗ್ಗೆ ಶ್ಲಾಘನೆ ವ್ಯಕ್ತಪಡಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.
ಪಂಚಾಯತ್ ಅಧ್ಯಕ್ಷೆ ಹರಿಣಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ತಾಲೂಕು ಸಂಪನ್ಮೂಲ ವ್ಯಕ್ತಿ (PRI-CBO CONVERGEUCE PROJEECT) ವಿದ್ಯಾಶ್ರೀ D NRLM ಯೋಜನೆಯ ಬಗ್ಗೆ ಘನತ್ಯ ನಿರ್ವಹಣೆ ಬಗ್ಗೆ ದಾಖಲಾತಿ ನಿರ್ವಹಣೆ ಲಿಂಗತ್ವ ವೇದಿಕೆ ಬಗ್ಗೆ ಮಾದಕ ವ್ಯಸನದ ಜಾಗೃತಿ ಮೂಡಿಸುವ ಬಗ್ಗೆ ಮಾಹಿತಿ ನೀಡಿದರು. ಮಾದಕ ವ್ಯಸನ ಮುಕ್ತ ಕರ್ನಾಟಕ ಪ್ರತಿಜ್ಞೆ ಮಂಡಿಸಿದರು.

ಗ್ರಾಮ ಪಂಚಾಯತ್ ಉಪಾಧ್ಯಕ್ಷ ಉಮೇಶ್ ಹಾಗೂ ಸುಧಾಕರ್ ಕುಲಾಲ್ ಪ್ರತಿನಿಧಿಯವರು ಶುಭ ಹಾರೈಸಿದರು. ಲಿಂಗತ್ವ ದೌರ್ಜನ್ಯದ ಬಗ್ಗೆ ಮಹಿಳಾ ಮಕ್ಕಳ ಅಭಿವೃದ್ಧಿ ಇಲಾಖೆ ಜಿಲ್ಲಾ ಕಾರ್ಯಕ್ರಮ ಸಂಯೋಜಕ ಅಶ್ವಿನಿ ರವರು ಮಾಹಿತಿ ನೀಡಿದರು. ಪುತ್ತೂರು ಸಾಂತ್ವನ ಕೇಂದ್ರದ ಆಪ್ತ ಸಮಾಲೋಚಕಿ ನಿಶಾ ಪ್ರಿಯ ಮಹಿಳೆಯರ ಮುಟ್ಟಿನ ಕಫ್ ಬಳಕೆ ಬಗ್ಗೆ ಮಾಹಿತಿ ನೀಡಿದರು. ಕಾರ್ಯಕ್ರಮದ ಕೊನೆಯಲ್ಲಿ ಪರಿವರ್ತನೆ ಭಿತ್ತಿ ಪತ್ರ ಬಿಡುಗಡೆ ಗೊಳಿಸಲಾಯಿತು.

ಭಾರತಿ ಪ್ರಾರ್ಥಿಸಿದರು. ಒಕ್ಕೂಟದ ಅಧ್ಯಕ್ಷೆ ಪೂರ್ಣಿಮಾ ಸ್ವಾಗತಿಸಿ, ಒಕ್ಕೂಟದ ಕಾರ್ಯದರ್ಶಿ ಸೌಮ್ಯ ವಾರ್ಷಿಕ ವರದಿ ಹಾಗೂ ಲೆಕ್ಕಪತ್ರ ಮಂಡಿಸಿದರು. ಎಂಬಿಕೆ ಅನುರಾಧ ಪ್ರಭು ನಿರೂಪಿಸಿದರು. ಸೌಮ್ಯ ವಂದಿಸಿದರು.