ಈಜು ಸ್ಪರ್ಧೆ: ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಮೈಸೂರು ವಿಭಾಗ ಮಟ್ಟಕ್ಕೆ ಆಯ್ಕೆ

0

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ದಕ್ಷಿಣ ಕನ್ನಡ ಜಿಲ್ಲೆ, ಮಂಗಳೂರು ಮಹಾನಗರ ಪಾಲಿಕೆ, MY Bharat ದಕ್ಷಿಣ ಕನ್ನಡ, ಜಿಲ್ಲಾ ಯುವ ಜನ ಒಕ್ಕೂಟ(ರಿ) ಹಾಗೂ ವಿವಿಧ ಸಂಘ ಸಂಸ್ಥೆಗಳು ಇದರ ಸಂಯುಕ್ತ ಆಶ್ರಯದಲ್ಲಿ ಸೆ.6 ಮತ್ತು 7ರಂದು ಮಂಗಳೂರಿನ ಮಂಗಳ ಕ್ರೀಡಾಂಗಣದಲ್ಲಿ  ನಡೆದ ‘ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ 2025-26’ ಸ್ಪರ್ಧೆಯಲ್ಲಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ದ್ವಿತೀಯ ವಿಜ್ಞಾನ ವಿಭಾಗದ ದಿಗಂತ್ ವಿ. ಎಸ್ 100ಮೀ, 200ಮೀ ಬ್ಯಾಕ್ ಸ್ಟ್ರೋಕ್, 200 ವೈಯಕ್ತಿಕ ಮೆಡ್ಲೆ ಮತ್ತು 100ಮೀ ಫ್ರೀ ಸ್ಟೈಲ್ ವಿಭಾಗದಲ್ಲಿ ಚಿನ್ನದ ಪದಕ  ಹಾಗೂ ಪ್ರಾಧಿ ಕ್ಲೇರೆ ಪಿಂಟೋ 200 ಮೀ ಬ್ಯಾಕ್ ಸ್ಟ್ರೋಕ್ ನಲ್ಲಿ ಬೆಳ್ಳಿ ಪದಕವನ್ನು ಪಡೆದುಕೊಂಡು ಹಾಸನದಲ್ಲಿ ನಡೆಯಲಿರುವ ಮೈಸೂರು ವಿಭಾಗ ಮಟ್ಟದ  ಕ್ರೀಡಾಕೂಟಕ್ಕೆ ಆಯ್ಕೆಯಾಗಿರುತ್ತಾರೆ.


ಇವರಿಗೆ ಪಾರ್ಥ ವಾರಣಾಸಿ ತರಬೇತಿ ನೀಡಿರುತ್ತಾರೆ. ಕಾಲೇಜಿನ ಪ್ರಾಂಶುಪಾಲರಾದ ರೆ.ಫಾ. ಅಶೋಕ್ ರಾಯನ್ ಕ್ರಾಸ್ತಾ ವಿದ್ಯಾರ್ಥಿಗಳನ್ನು ಅಭಿನಂದಿಸಿದರು. ದೈಹಿಕ ಶಿಕ್ಷಣ ನಿರ್ದೇಶಕರಾದ ಡಾ. ಏಲಿಯಾಸ್ ಪಿಂಟೋ ಹಾಗೂ ರಾಜೇಶ್ ಮೂಲ್ಯ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here