ಪುತ್ತೂರು: ಕರ್ನಾಟಕ ರಾಜ್ಯ ಭಾವೈಕ್ಯತಾ ಪರಿಷತ್ ಸಾಧಕರಿಗೆ ನೀಡುವ ಸಮಾಜ ರತ್ನ ಪ್ರಶಸ್ತಿಗೆ ಈ ಬಾರಿ ಉದ್ಯಮಿ ಸಮಾಜ ಸೇವಕ ಡಾ.ಹರ್ಷ ಕುಮಾರ್ ರೈ ಮಾಡವು ಆಯ್ಕೆಯಾಗಿದ್ದಾರೆ ಎಂದು ಸಂಸ್ಥೆಯ ಗೌರವಾಧ್ಯಕ್ಷ ನಿವೃತ್ತ ಡಿ.ಸಿ.ಪಿ ಜಿಏ ಬಾವಾ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಸೆಪ್ಟೆಂಬರ್ 14ರಂದು ಮಂಗಳೂರಿನ ದೇರಳಕಟ್ಟೆಯಲ್ಲಿ ನಡೆಯುವ ರಾಜ್ಯ ಮಟ್ಟದ ಚುಟುಕು ಕವಿಗೋಷ್ಠಿ ಕಾರ್ಯಕ್ರಮದಲ್ಲಿ ಸನ್ಮಾನ್ಯ ಸ್ಪೀಕರ್ ಯು ಟಿ ಖಾದರ್ ಸಮ್ಮುಖದಲ್ಲಿ ಈ ಪ್ರಶಸ್ತಿ ನೀಡಲಾಗುವುದೆಂದು ತಿಳಿಸಿದ್ದಾರೆ. ಡಾ.ಹರ್ಷ ಕುಮಾರ್ ರೈ ಹಲವು ಉದ್ಯಮವನ್ನು ನಡೆಸುತ್ತಿದ್ದು, ಹಲವು ಸಂಘ ಸಂಸ್ಥೆಗಳಲ್ಲಿ ಸಾರಥ್ಯವನ್ನು ವಹಿಸಿದ್ದಾರೆ. ಅವರ ಸಮಾಜಮುಖಿ ಸೇವೆಯನ್ನು ಪರಿಗಣಿಸಿ ಈ ಪ್ರಶಸ್ತಿಯನ್ನು ನೀಡಲಾಗಿದೆ ಎಂದು ಸಂಘಟಕರು ತಿಳಿಸಿದ್ದಾರೆ.