ನಿಡ್ಪಳ್ಳಿ: ಗ್ರಾಮ ಪಂಚಾಯತ್ ಸಾಮಾನ್ಯ ಸಭೆ ಅಧ್ಯಕ್ಷ ವೆಂಕಟ್ರಮಣ ಬೋರ್ಕರ್ ರವರ ಅಧ್ಯಕ್ಷತೆಯಲ್ಲಿ ಸೆ.9 ರಂದು ನಡೆಯಿತು.
ಇಲಾಖೆಯಿಂದ ಬಂದ ಸುತ್ತೋಲೆಗಳ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು. ಸಾರ್ವಜನಿಕರಿಂದ ಬಂದ ಅರ್ಜಿಗಳನ್ನು ಪರಿಶೀಲಿಸಿ ವಿಲೇವಾರಿ ಮಾಡಲಾಯಿತು.
ಪಂಚಾಯತ್ ಉಪಾಧ್ಯಕ್ಷೆ ಸೀತಾ, ಸದಸ್ಯರಾದ ಅವಿನಾಶ್ ರೈ, ಬಾಲಚಂದ್ರ ನಾಯ್ಕ, ಸತೀಶ್ ಶೆಟ್ಟಿ, ನಂದಿನಿ ಅರ್.ರೈ, ಗ್ರೇಟಾ ಡಿ’ ಸೋಜಾ,ಪಿಡಿಒ ಸಂಧ್ಯಾಲಕ್ಷ್ಮೀ ಉಪಸ್ಥಿತರಿದ್ದರು. ಕಾರ್ಯದರ್ಶಿ ಶಿವರಾಮ ಮೂಲ್ಯ ಸ್ವಾಗತಿಸಿ, ವಂದಿಸಿದರು. ಸಿಬ್ಬಂದಿಗಳಾದ ರೇವತಿ, ವಿನೀತ್ ಕುಮಾರ್, ಜಯ ಕುಮಾರಿ ಸಹಕರಿಸಿದರು.
ಪಂಚಾಯತ್ ವ್ಯಾಪ್ತಿಯಲ್ಲಿ ಪಶುಪಾಲನಾ ಇಲಾಖೆಯಿಂದ ಉಚಿತವಾಗಿ ನಾಯಿಗಳಿಗೆ ರೇಬೀಸ್ ನಿರೋಧಕ ಚುಚ್ಚುಮದ್ದು ಹಾಕುವ ಕಾರ್ಯಕ್ರಮ ಸೆ.19 ರಂದು ಶುಕ್ರವಾರ ನಡೆಯಲಿದೆ. ಸಾರ್ವಜನಿಕರು ತಪ್ಪದೆ ಶಿಬಿರ ನಡೆಯುವ ಸ್ಥಳಕ್ಕೆ ತಮ್ಮ ನಾಯಿಗಳನ್ನು ತಂದು ಚುಚ್ಚುಮದ್ದು ಹಾಕಿಸುವ ಮೂಲಕ ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಅಧ್ಯಕ್ಷರು ವಿನಂತಿಸಿದ್ದಾರೆ.