ಪುತ್ತೂರು: ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ನಡೆಸುವ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟವು ವಿವೇಕಾನಂದ ಪದವಿಪೂರ್ವ ಕಾಲೇಜು ಇದರ ಸಹಯೋಗದಲ್ಲಿ, ವಿವೇಕಾನಂದ ಕಾಲೇಜಿನ ಆವರಣದ ಮೈದಾನದಲ್ಲಿ ನಡೆಯಿತು.

ಈ ಪಂದ್ಯಾಟವನ್ನು ವಿವೇಕಾನಂದ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ದೇವಿ ಚರಣ್ ರೈ ಎಂ ಉದ್ಘಾಟಿಸಿದರು. ಈ ಪಂದ್ಯಾಟದಲ್ಲಿ ಸುಮಾರು 20 ಪದವಿಪೂರ್ವ ಕಾಲೇಜಿನ ತಂಡಗಳು ಭಾಗವಹಿಸಿದ್ದು, ಬಾಲಕರ ವಿಭಾಗದಲಿ ಇಂದ್ರಪ್ರಸ್ಥ ಪದವಿಪೂರ್ವ ಕಾಲೇಜು ಪ್ರಥಮ, ವಿವೇಕಾನಂದ ಪದವಿಪೂರ್ವ ಕಾಲೇಜು ದ್ವಿತೀಯ ಸ್ಥಾನವನ್ನು ಪಡೆದಿರುತ್ತದೆ.
ಹಾಗೆಯೇ ಬಾಲಕಿಯರ ವಿಭಾಗದಲ್ಲಿ ಸರಕಾರಿ ಪದವಿಪೂರ್ವ ಕಾಲೇಜು, ಕುಂಬ್ರ ಪ್ರಥಮ, ವಿವೇಕಾನಂದ ಪದವಿಪೂರ್ವ ಕಾಲೇಜು ದ್ವಿತೀಯ ಸ್ಥಾನವನ್ನು ಪಡೆದಿರುತ್ತದೆ. ಕಾರ್ಯಕ್ರಮದಲ್ಲಿ ಕಾಲೇಜಿನ ಶೈಕ್ಷಣಿಕ ಸಂಯೋಜಕರಾದ ಶ್ರೀವತ್ಸ ಎನ್, ದೈಹಿಕಶಿಕ್ಷಣ ನಿರ್ದೇಶಕರಾದ ರವಿಶಂಕರ್ ವಿ ಎಸ್, ಡಾ. ಜ್ಯೋತಿ ಕುಮಾರಿ, ಯತೀಶ್ ಮತ್ತು ವಿವಿಧ ಸಂಸ್ಥೆಗಳ ದೈಹಿಕ ಶಿಕ್ಷಣ ನಿರ್ದೇಶಕರು ಉಪಸ್ಥಿತರಿದ್ದರು.