ಜೀವನದಲ್ಲಿ ಉತ್ತಮ ಶಿಸ್ತು ಸಂಸ್ಕೃತಿ ಅಳವಡಿಸಿಕೊಳ್ಳಿ: ಆಶಾ ನಾಯಕ್
ಗುರು ಮತ್ತು ಗುರಿ ಇದ್ದರೆ ಸಾಧನೆ ಸಾಧ್ಯ: ಶ್ರೀಧರ್ ಶೆಟ್ಟಿ
ವಿಟ್ಲ: ಕ್ರೀಡೆಯಲ್ಲಿ ಸೋಲು ಗೆಲುವು ಸಮಾನವಾಗಿ ಸ್ವೀಕರಿಸಿ, ಜೀವನದಲ್ಲಿ ಉತ್ತಮ ಶಿಸ್ತು ಸಂಸ್ಕೃತಿ ಅಳವಡಿಸಿಕೊಳ್ಳಿ ಎಂದು ಬಂಟ್ವಾಳ ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕರಾದ ಆಶಾ ನಾಯಕ್ ರವರು ಹೇಳಿದರು.
ಅವರು ದಕ್ಷಿಣ ಕನ್ನಡ ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮತ್ತು ವಿಠ್ಠಲ್ ಜೇಸಿಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಗಳ ಸಹಯೋಗದಲ್ಲಿ ಸೆ.೯ರಂದು ನಡೆದ 14ರ ವಯೋಮಾನದ ವಿದ್ಯಾರ್ಥಿಗಳ ತಾಲೂಕು ಮಟ್ಟದ ತ್ರೋಬಾಲ್ ಪಂದ್ಯಾಟದ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು. ಸಂಸ್ಥೆಯ ಅಧ್ಯಕ್ಷರಾದ ಜೇಸಿ ಶ್ರೀಧರ್ ಶೆಟ್ಟಿ ರವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ, ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಗುರು ಮತ್ತು ಗುರಿ ಇದ್ದರೆ ಸಾಧನೆ ಸಾಧ್ಯ , ವಿದ್ಯಾರ್ಥಿಗಳಿಗೆ ಕಠಿಣ ಪರಿಶ್ರಮದ ಅಗತ್ಯವಿದೆ ಎಂದರು.
ವಿಟ್ಲ ವಲಯದ ಸಮೂಹ ಸಂಪನ್ಮೂಲ ವ್ಯಕ್ತಿ ಬಿಂದು, ಶಾಲಾ ಪ್ರಾಂಶುಪಾಲರಾದ ಜಯರಾಮ ರೈ , ಬಂಟ್ವಾಳದ ದೈಹಿಕ ಶಿಕ್ಷಕ ಸಂಘದ ಅಧ್ಯಕ್ಷರಾದ ರಾಜೇಂದ್ರ ರೈ , ಪ್ರಾಥಮಿಕ ಶಿಕ್ಷಕ ಸಂಘದ ಅಧ್ಯಕ್ಷರಾದ ಜಯರಾಮ, ದೈಹಿಕ ಶಿಕ್ಷಕ ಸಂಘದ ಉಪಾಧ್ಯಕ್ಷರಾದ ಚಿನ್ನಪ್ಪ, ವಿಟ್ಲವಲಯದ ಕ್ರೀಡಾ ನೋಡಲ್ ಅಧಿಕಾರಿಗಳಾದ ಸುರೇಶ್ ಶೆಟ್ಟಿ, ಸಂಸ್ಥೆಯ ನಿರ್ದೇಶಕರಾದ ಹಸನ್ ಸರ್, ಕೋಶಾಧಿಕಾರಿಗಳಾದ ಪ್ರಭಾಕರ್ ಶೆಟ್ಟಿ ,ಉಪ ಪ್ರಾಂಶುಪಾಲರಾದ ಜ್ಯೋತಿ ಶೆಣೈ ಮೊದಲಾದವರು ಉಪಸ್ಥಿತರಿದ್ದರು.
ವಿದ್ಯಾರ್ಥಿನಿಯರಾದ ಆತ್ಮಿಕ ಗೌರಿ, ಸೌಜನ್ಯ, ಮನಸ್ವಿ ಆರ್ ಶೆಟ್ಟಿ ,ಭುವಿ ಕಾಯರುಮಾರು ಪ್ರಾರ್ಥಿಸಿದರು. ಶಿಕ್ಷಕಿ ಗೀತಾ ಸ್ವಾಗತಿಸಿದರು. ಶಿಕ್ಷಕಿ ಜಯಶ್ರೀ ಕಾರ್ಯಕ್ರಮ ನಿರೂಪಿಸಿದರು. ದೈಹಿಕ ಶಿಕ್ಷಕಿ ಶಶಿಕಲಾರವರು ವಂದಿಸಿದರು.