ಪುತ್ತೂರು: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಹಾಗೂ ದರ್ಬೆ ಲಿಟ್ಲ್ ಫ್ಲವರ್ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ತಾಲೂಕು ಮಟ್ಟದ 14 ವರ್ಷದ ಬಾಲಕಿಯರ ಕಬಡ್ಡಿ ಪಂದ್ಯಾಟದಲ್ಲಿ ದರ್ಬೆಯ ಬೆಥನಿ ಆಂಗ್ಲ ಮಾಧ್ಯಮ ಶಾಲೆಯ ಬಾಲಕಿಯರ ತಂಡವು ಅತ್ಯುತ್ತಮ ಪ್ರದರ್ಶನ ನೀಡಿ ಪ್ರಥಮ ಸ್ಥಾನ ಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದೆ. ತಂಡದಲ್ಲಿ ಬೆಸ್ಟ್ ಆಲ್ ರೌಂಡರಾಗಿ ಜುವೆನ್ ಡ್ಯಾಸೆಲ್ ಕುಟಿನ್ಹಾ, ಬೆಸ್ಟ್ ಡಿಫೆಂಡರಾಗಿ ಜೆನಿಟಾ ಸಿಂಧು ಪಸನ್ನ, ಓವರ್ ಆಲ್ ಟೂರ್ನಮೆಂಟ್ ವಿನ್ನರಾಗಿ ಹಾರ್ದಿಕ ಪಿ. ಹಾಗೂ ಬೆಸ್ಟ್ ಪ್ಲೇಯರಾಗಿ ಸನ್ನಿಧಿ ವೈಯಕ್ತಿಕ ಪ್ರಶಸ್ತಿಗಳನ್ನು ಪಡೆದುಕೊಂಡಿರುತ್ತಾರೆ. ಶಿಕ್ಷಕ ಬಾಲಕೃಷ್ಣ ರೈ ಪೊರ್ದಾಲ್ ವಿದ್ಯಾರ್ಥಿಗಳಿಗೆ ಅತ್ಯುತ್ತಮ ತರಬೇತಿ ನೀಡಿರುತ್ತಾರೆ.