ಪುತ್ತೂರು: ರೋಟರಿ ಕ್ಲಬ್ ಪುತ್ತೂರು ಮತ್ತು ಇನ್ನರ್ ವ್ಹೀಲ್ ಕ್ಲಬ್ ಪುತ್ತೂರುನಿಂದ ಶಿಕ್ಷಕರ ದಿನಾಚರಣೆ ಮತ್ತು ನಿವೃತ್ತ ಶಿಕ್ಷಕರಿಗೆ ಸನ್ಮಾನ ಕ ಕಾರ್ಯಕ್ರಮ ಸೆ.12 ರಂದು ಸಂಜೆ ತೆಂಕಿಲ ಒಕ್ಕಲಿಗ ಗೌಡ ಸಮುದಾಯ ಭವನದ ಚುಂಚಶ್ರೀ ಸಭಾಭವನದಲ್ಲಿ ನೆರವೇರಲಿದೆ.
ಮುಖ್ಯ ಅತಿಥಿಯಾಗಿ ರೋಟರಿ ಜಿಲ್ಲೆ 3181 ಇದರ 2027-28ರ ನಿಯೋಜಿತ ಜಿಲ್ಲಾ ಗವರ್ನರ್ ಯಶಸ್ವಿ ಸೋಮಶೇಖರ್ ರವರು ಭಾಗವಹಿಸಲಿದ್ದಾರೆ ಎಂದು ರೋಟರಿ ಪುತ್ತೂರು ಅಧ್ಯಕ್ಷ ಡಾ.ಶ್ರೀಪ್ರಕಾಶ್ ಬಿ, ಕಾರ್ಯದರ್ಶಿ ಸುಬ್ಬಪ್ಪ ಕೈಕಂಬ, ಕಾರ್ಯಕ್ರಮ ಸಂಯೋಜಕ ಚಿದಾನಂದ ಬೈಲಾಡಿ, ವೃತ್ತಿಪರ ನಿರ್ದೇಶಕ ಸತೀಶ್ ನಾಯಕ್, ಇನ್ನರ್ ವ್ಹೀಲ್ ಅಧ್ಯಕ್ಷೆ ಶ್ರೀಮತಿ ರೂಪಲೇಖ, ಕಾರ್ಯದರ್ಶಿ ಶ್ರೀಮತಿ ಸಂಧ್ಯಾ ಸಾಯರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.