ಪುತ್ತೂರು: ಕೊಳವೆ ಬಾವಿ ಮಂಜೂರಾತಿಗಾಗಿ ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಪೊಲೀಸರಿಂದ ಬಂಧನ ಪ್ರಕರಣದ ಆರೋಪಿಗಳಾಗಿರುವ ಪೆರುವಾಯಿ ಗ್ರಾ.ಪಂ.ಅಧ್ಯಕ್ಷೆ ನಫೀಸಾ ಮತ್ತು ಬಿಲ್ ಕಲೆಕ್ಟರ್ ವಿಲಿಯಂ ಜಾಮೀನು ಕೋರಿ ಸಲ್ಲಿಸಿರುವ ಅರ್ಜಿಯ ವಿಚಾರಣೆ ಸೆ.12ಕ್ಕೆ ಮುಂದೂಡಿಕೆಯಾಗಿದೆ.
ಲೋಕಾಯುಕ್ತ ಪೊಲೀಸರು ಸೆ.6ರಂದು ದಾಳಿ ನಡೆಸಿ ಗ್ರಾ.ಪಂ. ಅಧ್ಯಕ್ಷೆ ನಫೀಸಾ ಪೆರುವಾಯಿ ಹಾಗೂ ಬಿಲ್ ಕಲೆಕ್ಟರ್ ವಿಲಿಯಂ ಅವರನ್ನು ಬಂಧಿಸಿದ್ದರು. ಬಂಧಿತರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಆರೋಪಿಗಳು ಜಾಮೀನಿನಲ್ಲಿ ಬಿಡುಗಡೆ ಕೋರಿ ಲೋಕಾಯುಕ್ತ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ಸೆ.10ಕ್ಕೆ ನಿಗದಿಯಾಗಿತ್ತು. ಈ ದಿನ ವಿಚಾರಣೆ ವೇಳೆ ಲೋಕಾಯುಕ್ತ ಪರ ವಕೀಲರಾದ ರವೀಂದ್ರ ಮುನ್ನಿಪ್ಪಾಡಿ ಅವರು ಆಕ್ಷೇಪಣೆ ಸಲ್ಲಿಕೆಗೆ ಕಾಲಾವಕಾಶ ಕೋರಿದ ಹಿನ್ನೆಲೆಯಲ್ಲಿ ವಿಚಾರಣೆಯನ್ನು ಸೆ.12ಕ್ಕೆ ಮುಂದೂಡಲಾಗಿದೆ.