ಪುತ್ತೂರು: ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ದ.ಕ. ಜಿಲ್ಲೆ ಮಂಗಳೂರು ಆಯೋಜಿಸಿದ್ದ 2025-26ನೇ ಸಾಲಿನ ಜಿಲ್ಲಾ ಮಟ್ಟದ ಈಜು ಸ್ಪರ್ಧೆಯಲ್ಲಿ ಪುತ್ತೂರಿನ ಸುದಾನ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಕ್ರೀಡಾ ಪ್ರತಿಭೆಯನ್ನು ಮೆರೆದಿದ್ದಾರೆ.
ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ಅನಿಖಾ ಯು.ರವರು 50 ಮೀ. ಫ್ರೀಸ್ಟೈಲ್ ನಲ್ಲಿ ಪ್ರಥಮ ಸ್ಥಾನ, 200 ಮೀ. ವೈಯಕ್ತಿಕ ಮಿಡ್ಲೆ ವಿಭಾಗದಲ್ಲಿ ಪ್ರಥಮ ಸ್ಥಾನ ಹಾಗೂ 400ಮೀ. ಫ್ರೀಸ್ಟೈಲ್ ನಲ್ಲಿ ಪ್ರಥಮ ಸ್ಥಾನ ಗಳಿಸಿದ್ದಾರೆ. ಕಾಲೇಜಿನ ದ್ವಿತೀಯ ವಿಜ್ಞಾನ ವಿಭಾಗದ ವೇದವ್ರತ್ ಭಂಡಾರಿ ಅವರು 500 ಮೀ. ಬ್ರೆಸ್ಟ್ ಸ್ಟ್ರೋಕ್ ವಿಭಾಗದಲ್ಲಿ ತೃತೀಯ ಸ್ಥಾನ ಪಡೆದಿರುತ್ತಾರೆ.
ವಿದ್ಯಾರ್ಥಿಗಳ ಸಾಧನೆಗೆ ಕಾಲೇಜು ಪ್ರಾಂಶುಪಾಲರು, ಶಿಕ್ಷಕರು ಹರ್ಷ ವ್ಯಕ್ತಪಡಿಸಿ ಮುಂದಿನ ರಾಜ್ಯ ಮಟ್ಟದ ಕ್ರೀಡಾಕೂಟಕ್ಕೂ ಶುಭ ಹಾರೈಸಿದ್ದಾರೆ.