ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ, ಉಪನಿರ್ದೇಶಕರ ಕಛೇರಿ ದ.ಕ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಪುತ್ತೂರು, ಸಂತ ವಿಕ್ಟರ್ ಬಾಲಿಕಾ ಪ್ರೌಢ ಶಾಲೆ ಪುತ್ತೂರು ಇವರ ಸಹಯೋಗದೊಂದಿಗೆ ಬಾಲಕ/ಬಾಲಕಿಯರ ಟೇಬಲ್ ಟೆನ್ನಿಸ್ ಪಂದ್ಯಾಟವು ಸಂತ ವಿಕ್ಟರ್ ಬಾಲಿಕಾ ಪ್ರೌಢ ಶಾಲಾ ಸಭಾಂಗಣದಲ್ಲಿ ಜರುಗಿತು.

ಪುತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ಎಸ್.ಆರ್ ಟೇಬಲ್ ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿ ಶುಭ ಹಾರೈಸಿದರು. ಅಧ್ಯಕ್ಷತೆ ವಹಿಸಿದ ಮಾಯ್ ದೆ ದೇವುಸ್ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕರಾದ ವಂ| ಲಾರೆನ್ಸ್ ಮಾಸ್ಕರೇನ್ಹಸ್ರವರು ಮಾತನಾಡಿ ದೈಹಿಕ ಚಟುವಟಿಕೆ ಅನುಭವಿಸಲು ಅಗತ್ಯ ಜ್ಞಾನ ಕೌಶಲ್ಯ ಹಾಗೂ ದೈಹಿಕವಾಗಿ ಮತ್ತು ಮಾನಸಿಕವಾಗಿ ಬೆಳೆಯುತ್ತದೆ ಎಂದು ಶುಭ ಹಾರೈಸಿದರು. ಪುತ್ತೂರು ತಾಲೂಕಿನ ದೈಹಿಕ ಶಿಕ್ಷಣ ಪರೀವೀಕ್ಷಣಾಧಿಕಾರಿ ಚಕ್ರಪಾಣಿ ಎ.ವಿ. ಸ್ವಾಗತಿಸಿ ಪ್ರಾಸ್ತಾವಿಕ ಮಾತನಾಡಿ ಶುಭಹಾರೈಸಿದರು.
ಮಾಯ್ ದೆ ದೇವುಸ್ ಚರ್ಚ್ ಪಾಲನ ಸಮಿತಿಯ ಉಪಾಧ್ಯಕ್ಷ ಜೆರಾಲ್ಡ್ ಡಿಕೋಸ್ಟ, ಕ್ಲಸ್ಟರಿನ ಸಿಆರ್ಪಿ ಶಶಿಕಲಾ, ಜಿಲ್ಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿ ಮಾಮಾಚ್ಚನ್, ರಕ್ಷಕ ಶಿಕ್ಷಕ ಸಂಘದ ಉಪಾಧ್ಯಕ್ಷ ಶ್ವೇತಾ ಕೆ., ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಇವಾನ್ ಮಾಸ್ಕರೇನ್ಹಸ್ ಉಪಸ್ಥಿತರಿದ್ದರು. ವಿದ್ಯಾರ್ಥಿನಿಯರು ಪ್ರಾರ್ಥಿಸಿದರು. ಮುಖ್ಯ ಶಿಕ್ಷಕಿ ರೋಸಲಿನ್ ಫ್ಲೇವಿ ಲೋಬೊ ವಂದಿಸಿ ಶಿಕ್ಷಕಿ ರೂಪ ಡಿಕೋಸ್ಟ ಕಾರ್ಯಕ್ರಮ ನಿರ್ವಹಿಸಿದರು. ರಕ್ಷಕ ಶಿಕ್ಷಕ ಸಂಘದ ಸಮಿತಿಯ ಸದಸ್ಯರು, ಮಕ್ಕಳ ಸುರಕ್ಷಾ ಸದಸ್ಯರು, ಹಾಗೂ ತಾಯಂದಿರ ಸಮಿತಿಯ ಸದಸ್ಯರು, ಶಾಲಾ ಶಿಕ್ಷಕ ಶಿಕ್ಷಕೇತರ ವೃಂದ ಸಹಕರಿಸಿದರು.