ರಾಮಕುಂಜ: ಪದವಿ ಪೂರ್ವ ಕಾಲೇಜು ವಿಭಾಗದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಖೋಖೋ ಪಂದ್ಯಾಟ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಳದ ಆಶ್ರಯದಲ್ಲಿ ನಡೆಯಿತು.
ಈ ಪಂದ್ಯಾಟದಲ್ಲಿ ಶ್ರೀ ರಾಮಕುಂಜೇಶ್ವರ ಪದವಿ ಪೂರ್ವ ಕಾಲೇಜು ತಂಡ ತೃತೀಯ ಸ್ಥಾನ ಪಡೆದುಕೊಂಡಿದೆ. ಸಂಸ್ಥೆಯ ದ್ವಿತೀಯ ಎಸ್ಇಬಿಎ ವಿದ್ಯಾರ್ಥಿ ಲವೀತ್ ರಾಜ್ಯ ತಂಡಕ್ಕೆ ಆಯ್ಕೆಯಾಗಿದ್ದಾರೆ. ಬಾಲಕಿಯರ ವಿಭಾಗದ ಖೋಖೋ ಪಂದ್ಯಾಟದಲ್ಲಿ ಕಾಲೇಜಿನ ವಿದ್ಯಾರ್ಥಿನಿಯರಾದ ಶ್ವೇತಾ, ಜಯಶ್ರೀ, ಶರಣ್ಯರವರು ಪ್ರತಿನಿಧಿಸಿದ ಕಡಬ ತಾಲೂಕು ತಂಡ ಚತುರ್ಥ ಸ್ಥಾನ ಪಡೆದುಕೊಂಡಿದೆ. ಶಾಲೆಯ ದೈಹಿಕ ಶಿಕ್ಷಣ ಉಪನ್ಯಾಸಕ ಗಣೇಶ್ ಕೆ., ಹಿರಿಯ ವಿದ್ಯಾರ್ಥಿ ನಿಶಾಂತ್ ತರಬೇತಿ ನೀಡಿದ್ದರು.