ಪುತ್ತೂರು: ಅರಿಯಡ್ಕ ಗ್ರಾಮದ ಕೋಡಿಯಡ್ಕ ಎಂಬಲ್ಲಿ ನಿರ್ಮಾಣವಾಗುತ್ತಿರುವ ದೈವಸ್ಥಾನದ ಕೆಲಸ ಕಾರ್ಯಕ್ಕೆ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ನಿಂದ ಆರ್ಥಿಕ ಸಹಕಾರ ನೀಡಲಾಯಿತು.
ಈ ಸಂದರ್ಭದಲ್ಲಿ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ನ ಸಂಚಾಲಕ ಅರುಣ್ ಕುಮಾರ್ ಪುತ್ತಿಲ, ಅಧ್ಯಕ್ಷ ಶ್ರೀರಾಮ್ ಭಟ್ ಪಾತಾಳ, ಪ್ರಧಾನ ಕಾರ್ಯದರ್ಶಿ ಪ್ರೆಮರಾಜ್ ಆರ್ಲಪದವು, ಕೋಶಾಧಿಕಾರಿ ರೂಪೇಶ್ ನಾಯ್ಕ್ ಟಿ, ಬಿಜೆಪಿ ನಗರ ಮಂಡಲ ಪ್ರಧಾನ ಕಾರ್ಯದರ್ಶಿ ಅನಿಲ್ ತೆಂಕಿಲ ಉಪಸ್ಥಿತರಿದ್ದರು.