ಪುತ್ತೂರು: ಮಾಯಿದೆ ದೇವುಸ್ ಚರ್ಚ್ ನ ಬಿಲ್ಡಿಂಗ್ ನಲ್ಲಿ ಕಾರ್ಯಾಚರಿಸುತ್ತಿರುವ ಡೊನ್ ಬೊಸ್ಕೊ ಕ್ಲಬ್ ಕಳೆದ ಹಲವಾರು ವರ್ಷಗಳಿಂದ ಪುತ್ತೂರಿನ ವಿದ್ಯಾರ್ಥಿ ಸಾಧಕರನ್ನು ಮತ್ತು ಕ್ರೀಡಾ ಪ್ರತಿಭೆಗಳನ್ನು ಪ್ರೋತ್ಸಾಹಿಸುತ್ತಾ ಬಂದಿದ್ದು, ಈ ಬಾರಿಯೂ ಸೆ.14 ರಂದು ಪೂರ್ವಾಹ್ನ ಪ್ರತಿಭಾ ಪುರಸ್ಕಾರ-2025 ಕಾರ್ಯಕ್ರಮವು ಮಾಯಿದೆ ದೇವುಸ್ ಚರ್ಚ್ ಸಭಾಂಗಣದಲ್ಲಿ ಆಯೋಜಿಸಲಾಗಿದೆ.
ಮುಖ್ಯ ಅತಿಥಿಯಾಗಿ ಪುತ್ತೂರು ಸಹಾಯಕ ಆಯುಕ್ತರಾದ ಸ್ಟೆಲ್ಲಾ ವರ್ಗೀಸ್ ರವರು ಭಾಗವಹಿಸಲಿದ್ದಾರೆ. ಗೌರವ ಉಪಸ್ಥಿತಿಯಾಗಿ ಮಾಯಿದೆ ದೇವುಸ್ ಚರ್ಚ್ ಪ್ರಧಾನ ಧರ್ಮಗುರು ವಂ|ಲಾರೆನ್ಸ್ ಮಸ್ಕರೇನ್ಹಸ್, ಪುತ್ತೂರು ಉಪ ವಿಭಾಗದ ಅಬಕಾರಿ ನಿರೀಕ್ಷಕಿ ಜೋಸ್ಲಿನ್ ಜೆ.ಫೆರ್ನಾಂಡೀಸ್ ರವರು ಉಪಸ್ಥಿತಲಿರುವರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಡೊನ್ ಬೊಸ್ಕೊ ಕ್ಲಬ್ ಅಧ್ಯಕ್ಷ ಅಂತೋನಿ ಒಲಿವೆರಾರವರು ವಹಿಸಿಕೊಳ್ಳಲಿರುವರು ಎಂದು ಕ್ಲಬ್ ಕಾರ್ಯದರ್ಶಿ ಅನಿಲ್ ಜಿ.ಪಾಯಿಸ್ ಹಾಗೂ ಪದಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.